![PARISARA [UNSET]](http://media.assettype.com/vijayavani-media%2Fimport%2Fcdn.vvimgs.com%2Fwp-content%2Fuploads%2F2020%2F06%2FPARISARA-UNSET.jpg?w=480&auto=format%2Ccompress&fit=max)
![PARISARA [UNSET]](http://media.assettype.com/vijayavani-media%2Fimport%2Fcdn.vvimgs.com%2Fwp-content%2Fuploads%2F2020%2F06%2FPARISARA-UNSET.jpg?w=480&auto=format%2Ccompress&fit=max)
ಮೈಸೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಜಂಟಿಯಾಗಿ ಜೂನ್ 8 ರ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ಮಣ್ಣು ಮತ್ತು ಭೂಮಿಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು” ವಿಷಯದ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.
ಪ್ರಬಂಧವು 1000 ಪದಗಳನ್ನು ಮೀರಬಾರದು ಮತ್ತು ಇಂಗ್ಲಿμï ನಲ್ಲಿ ಏರಿಯಾಲ್ ಪಾಂಟ್ ಗಾತ್ರ 14 ಮತ್ತು ಕನ್ನಡದಲ್ಲಿ ನುಡಿ ಯೂನಿಕೋಡ್ 12 ಗಾತ್ರದಲ್ಲಿ ಟೈಪ್ ಮಾಡಿ ಕಳುಹಿಸಬೇಕು.
ಕರ್ನಾಟಕ ರಾಜ್ಯದ ಯಾವುದೇ ಮಂಡಳಿಯಲ್ಲಿ ಪ್ರಸ್ತುತ ದಾಖಲಾದ ಪ್ರೌಢಶಾಲಾ ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರಬಂಧಗಳನ್ನು ಕನ್ನಡ ಅಥವಾ ಇಂಗ್ಲಿಷ್ ನಲ್ಲಿ ಸಲ್ಲಿಸಬಹುದು. ಪ್ರತಿ ಭಾಷೆಗೆ ಒಬ್ಬ ಸ್ಪರ್ಧಿಗೆ ಕೇವಲ ಒಂದು ಪ್ರಬಂಧವನ್ನು ಮಾತ್ರ ಸಲ್ಲಿಸಲು ಅವಕಾಶವಿದೆ ಯಾವುದೇ ಸ್ಪರ್ಧಿಯು ಒಂದು ನಿರ್ದಿಷ್ಟ ಭಾಷೆಯಲ್ಲಿ ಒಂದಕ್ಕಿಂತ ಹೆಚ್ಚು ಪ್ರಬಂಧಗಳನ್ನು ಸಲ್ಲಿಸಿರುವುದು ಕಂಡುಬಂದರೆ, ಅವರು ಸಲ್ಲಿಸಿದ ಎಲ್ಲಾ ಪ್ರಬಂಧಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ. ಪ್ರಬಂಧದ ಕೊನೆಯಲ್ಲಿ ಹೆಸರು, ವಿಳಾಸ ಸಂಪರ್ಕ ಸಂಖ್ಯೆ ಮತ್ತು ಇ-ಮೇಲ್ ವಿವರಗಳನ್ನು ಒದಗಿಸಬೇಕು. ಪ್ರಬಂಧವನ್ನು ಸಲ್ಲಿಸಲು ಮೇ 27 ಕೊನೆಯ ದಿನಾಂಕವಾಗಿದೆ.