ಎಸ್ಸೆಸ್ಸೆಲ್ಸಿ ಲಿತಾಂಶ ಸುಧಾರಣೆಗೆ ಶ್ರಮಿಸಿ

SSLC
ಹೂವಿನಹಡಗಲಿಯ ನಾಗತಿಬಸಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿಷಯ ಶಿಕ್ಷಕರ ಕಾರ್ಯಾಗಾರವನ್ನು ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ ಉದ್ಘಾಟಿಸಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ, ಮುಖ್ಯ ಶಿಕ್ಷಕಿ ಸಯ್ಯದ್ ಮುಬಿನಾ, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಶಿವಲಿಂಗಪ್ಪ ನಿರ್ದೇಶಕ ಎಚ್.ಕಾಂತೇಶ, ಇಸಿಒ ಮಲ್ಲಿಕಾರ್ಜುನ ಇತರರಿದ್ದರು.
Published on

ಹೂವಿನಹಡಗಲಿ: ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆೆ ವಿನೂತನ ಮಾದರಿಯಿಂದ ನಡೆಯಲಿದ್ದು ಎಲ್ಲಾ ಶಿಕ್ಷಕರು ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರ ಲಿತಾಂಶ ಸುಧಾರಣೆಗೆ ಶ್ರಮಿಸಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ ಹೇಳಿದರು.

ತಾಲೂಕಿನ ನಾಗತಿಬಸಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಶಾಲಾ ಸಾಕ್ಷರತಾ ಶಿಕ್ಷಣ ಇಲಾಖೆ ಮತ್ತು ಪ್ರೌಢಶಾಲೆ ಸಹ ಶಿಕ್ಷಕರ ಸಂಘ, ಸಮಾಜ ಮತ್ತು ಹಿಂದಿ ವಿಷಯ ಶಿಕ್ಷಕರ ವೇದಿಕೆ ಸಹಯೋಗದಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ವಿಷಯ ಶಿಕ್ಷಕರ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಫಲಿತಾಂಶ

ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಶಿಕ್ಷಕರು ಮುಖ್ಯವಾಹಿನಿಗೆ ತರಬೇಕು. ಶಾಲೆಗೆ ಗೈರಾದ ವಿದ್ಯಾರ್ಥಿಗಳನ್ನು ಕರೆತರಲು ಎಲ್ಲಾ ಶಿಕ್ಷಕರು ಪ್ರಯತ್ನಿಸಬೇಕು. ಶಿಕ್ಷಕರು ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಜೊತೆ ಚರ್ಚಿಸುವ ಮೂಲಕ ತಮ್ಮಗೊಂದಲಗಳನ್ನು ಪರಿಹರಿಸಿಕೊಳ್ಳಬೇಕು ಎಂದರು.


ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ ಮಾತನಾಡಿ, ಮಗುವಿನ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾರ್ಗದರ್ಶನ ಮಾಡಬೇಕು ಎಂದರು.


ಹಿಂದಿ ಶಿಕ್ಷಕರ ವೇದಿಕೆ ಅಧ್ಯಕ್ಷ ಎಲ್.ಖಾದರ್ ಭಾಷಾ, ಸಮಾಜ ವಿಜ್ಞಾನ ಶಿಕ್ಷಕರ ವೇದಿಕೆಯ ಅಧ್ಯಕ್ಷ ಬನ್ನೆಪ್ಪ, ಸಂಪನ್ಮೂಲ ವ್ಯಕ್ತಿ ಮಹಾದೇವಪ್ಪ ಕುಂದರಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net