ದ.ಕ ಜಿಲ್ಲೆಯಲ್ಲಿ ಬೆಳಗ್ಗೆ 7ರಿಂದ ಮಧ್ಯಾಹ್ನ 1ರ ವರೆಗೆ ಮಾತ್ರ ಓಪನ್? ಶೀಘ್ರ ಜಿಲ್ಲಾಡಳಿತ ಆದೇಶ ನಿರೀಕ್ಷೆ

mng-june9-lockdown-01
Published on

ಮಂಗಳೂರು: ದ.ಕ ಸೇರಿದಂತೆ ೧೪ ಜಿಲ್ಲೆಗಳಲ್ಲಿ ಸರ್ಕಾರ ಲಾಕ್‌ಡೌನ್‌ ತುಸು ಸಡಿಲಿಕೆ ಘೋಷಿಸಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಅದರಲ್ಲೊಂದಷ್ಟು ಬದಲಾವಣೆ ಮಾಡುವ ಸಾಧ್ಯತೆ ಇದೆ.
ಅದರಂತೆ ಬೆಳಗ್ಗೆ ೬ರಿಂದ ಮಧ್ಯಾಹ್ನ ೨ ಗಂಟೆಯ ವರೆಗೆ ಅಗತ್ಯವಸ್ತು ಖರೀದಿಗೆ ಅವಕಾಶ ನೀಡುವ ಬದಲು ಬೆಳಗ್ಗೆ ೭ರಿಂದ ಮಧ್ಯಾಹ್ನ ೧ರ ವರೆಗೆ ಮಾತ್ರವೇ ಅಗತ್ಯವಸ್ತು ಖರೀದಿಗೆ ಅವಕಾಶ ನೀಡುವುದಕ್ಕೆ ಜಿಲ್ಲಾಡಳಿತ ನಿರ್ಧರಿಸಿದೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇತರ ಜನಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಸಮಾಲೋಚನೆ ನಡೆಸಿದ್ದು ಬಸ್‌ ಸಂಚಾರ ಸದ್ಯ ಶುರು ಮಾಡದಿರಲು ತೀರ್ಮಾನಿಸಲಾಗಿದೆ. ಉಳಿದಂತೆ ಜೂನ್‌ ೧೧ರ ಆದೇಶ ಬಹುತೇಕ ಅನ್ವಯವಾಗುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net