ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾಸಾಗಲಿಲ್ಲವೆಂದು ವಿದ್ಯಾರ್ಥಿ ಆತ್ಮಹತ್ಯೆ

Crime Logo
Published on

ಶಿಗ್ಗಾಂವಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಲಿಲ್ಲವೆಂದು ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶಿಶುವಿನಹಾಳ ಗ್ರಾಮದಲ್ಲಿ ಭಾನುವಾರ ನಡೆದಿದೆ.

ನಿಂಗನಗೌಡ ದ್ಯಾವನಗೌಡ ಸಿದ್ದನಗೌಡ (೧೭) ಮೃತ ವಿದ್ಯಾರ್ಥಿ.

ಈತ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ. ಆದರೆ, ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಲಿಲ್ಲ. ಇದರಿಂದ ಮನನೊಂದು ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹುಲಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net