

ವಿಜಯಪುರ:ಜನರ ಆರೋಗ್ಯದ ಮೇಲೆ ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಿಲ್ಲೆಯ ಶಾಲೆ& ಕಾಲೇಜುಗಳಲ್ಲಿ ಆ್ಯಂಟಿ ಡ್ರಗ್ ಟಕ ಸ್ಥಾಪಿಸುವ ಮೂಲ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕೆಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮಾದಕ ದ್ರವ್ಯಗಳ ನಿಮೂರ್ಲನಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಶಾಲಾ ಕಾಲೇಜುಗಳಲ್ಲಿ ನಿರ್ಮಿಸಿದ ಆ್ಯಂಟಿ ಡ್ರಗ್ ಟಕಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ಅದರ ಕಾರ್ಯ ವೈಖರಿ ಕುರಿತು ನೋಡಲ್ ಅಧಿಕಾರಿಗಳು ಕಾಲಕಾಲಕ್ಕೆ ನಿರ್ದೇಶನ ನೀಡಿ, ಪ್ರತಿ ತಿಂಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆಯಂತಹ ಚಟುವಟಿಕೆ ಮೂಲಕ ಮಾದಕ ವಸ್ತು&ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮದ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.
ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟವಾಗದಂತೆ ಸಂಬಂಧಿಸಿದ ಇಲಾಖೆಗಳು ಸಮನ್ವಯ ಸಾಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ರಮ ಮದ್ಯ ಮಾರಾಟವಾಗದಂತೆ ನೋಡಿಕೊಳ್ಳಲು ಗ್ರಾಪಂ ಹಾಗೂ ಸ್ಥಳಿಯ ಆಡಳಿತದೊಂದಿಗೆ ಸಂಪರ್ಕ ಸಾಧಿಸಿ, ಅನಧಿಕೃತವಾಗಿ ಮದ್ಯ ಮಾರುವವರ ಮೇಲೆ ಕ್ರಮ ವಹಿಸಬೇಕು. ಅನಧಿಕೃತ ಮದ್ಯ ಮಾರುವವರ ಟ್ರೇಡ್ ಲೈಸನ್ಸ್ ರದ್ದುಗೊಳಿಸಿ ತೆಗೆದುಕೊಂಡ ಕ್ರಮದ ಮಾಹಿತಿಯನ್ನು ಸಭೆಗೆ ನೀಡಬೇಕೆಂದು ತಾಕೀತು ಮಾಡಿದರು.
ಅಬಕಾರಿ ಇಲಾಖೆ ಆಗಸ್ಟ್ನಲ್ಲಿ 119 ದಾಳಿ ಕೈಗೊಂಡಿದ್ದು, ಈ ಪೈಕಿ 10 ೂರ ಪ್ರಕರಣಗಳು, ದಾಬಾ ಹೋಟೆಲ್ ಸಾರ್ವಜನಿಕ ಸ್ಥಳಗಳಲ್ಲಿ 39 ಪ್ರಕರಣಗಳು, ಸನ್ನದುಗಳ ಅಂಗಡಿಯಲ್ಲಿ 15 ಪ್ರಕರಣಗಳು ಸೇರಿ ಒಟ್ಟು 64 ಪ್ರಕರಣಗಳನ್ನು ದಾಖಲಿಸಿದೆ ಎಂದು ಅಬಕಾರಿ ಉಪ ಆಯುಕ್ತ ಮುರಳೀಧರ ಎಚ್.ಒ. ಸಭೆಗೆ ಮಾಹಿತಿ ನೀಡಿದರು.
ನಶಾ ಮುಕ್ತ ಕೇಂದ್ರಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಆಯಾ ತಾಲೂಕಿನ ವೈದ್ಯಾಧಿಕಾರಿಗಳು ಒಳರೋಗಿ, ಹೊರರೋಗಿ ಕೈಗೊಂಡ ವೈದ್ಯಕಿಯ ಚಿಕಿತ್ಸೆ ಔಷಧೋಪಚಾರ ಬಗ್ಗೆ ನಿಗಾ ವಹಿಸಬೇಕು. ಕ್ರೋಢಿಕೃತ ಮಾಹಿತಿಯೊಂದಿಗೆ ಮುಂದಿನ ಸಭೆಗೆ ಬರಬೇಕು. ಜಿಲ್ಲಾ ಆರೋಗ್ಯ ಇಲಾಖೆ ಮೂಲಕ ಸೇವನೆಗೊಳಗಾದವರನ್ನು ಪರೀೆಗೊಳಪಡಿಸಲು ಕ್ರಮ ವಹಿಸುವಂತೆ ಈಗಾಗಲೇ ಸೂಚಿಸಲಾಗಿದೆ. ಸಮಗ್ರ ಪಟ್ಟಿಮಾಡಿ ಮಾಹಿತಿ ಒದಗಿಸಬೇಕೆಂದರು.
ಜಿಲ್ಲೆಯಲ್ಲಿರುವ ದಿನದ 24 ಗಂಟೆ ಕಾರ್ಯ ನಿರ್ವಹಿಸುತ್ತಿರುವ ಟೆಲಿ ಮನಸ್ ಸಹಾಯವಾಣಿ ಸಂಖ್ಯೆಗೆ ಕರೆಮಾಡಿ ಕೌನ್ಸೆಲಿಂಗ್ ಪಡೆಯುವಂತೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಈ ಮಾಹಿತಿಯನ್ನು ಎಲ್ಲ ಶಾಲಾ ಕಾಲೇಜಿನಲ್ಲಿ ಪ್ರದರ್ಶಿಸಬೇಕು. ಮಾದಕ ದ್ರವ್ಯ ಬೆಳೆಯುವಂತಹ ಸಸಿ, ಗಿಡಗಳ ಮೇಲೆ ಅರಣ್ಯ ಇಲಾಖೆ ನಿರಂತರ ನಿಗಾ ಇರಿಸಬೇಕಲ್ಲದೆ, ಇಂತಹುಗಳು ಕಂಡರೆ ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಮಳಿಗೆಗಳಲ್ಲಿ ಕಡ್ಡಾಯವಾಗಿ ವೈದ್ಯರ ಅನುಮತಿ ಪಡೆದು ಔಷಧ ಮಾರಾಟಕ್ಕೆ ಕ್ರಮ ವಹಿಸಬೇಕು. ಜಿಲ್ಲೆಯಾದ್ಯಂತ ಮೂರು ವರ್ಷಗಳಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ 2023ರಲ್ಲಿ 29 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದರು.ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಅನುರಾಧಾ ವಸದ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಿಂ ಬಾಬಾ, ಪೀಟರ್ ಅಲೆಕ್ಸಾಂಡರ್ ಮತ್ತಿತರರಿದ್ದರು.
ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿಮೂರ್ಲನಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಮಾತನಾಡಿದರು. ಅನುರಾಧಾ ವಸದ, ಪೀಟರ್ ಅಲೆಕ್ಸಾಂಡರ್ ಮತ್ತಿತರರಿದ್ದಾರೆ.