

ಕುಂಬಳೆ: ಅಂಗಡಿಮೊಗರು ಸಮೀಪದ ದೇಲಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗುತ್ತಿದ್ದು, ಇದರ ಪೂರ್ವಭಾವಿಯಾಗಿ ದೇವಳದಲ್ಲಿ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠಾಪನೆ ನಡೆಯಿತು.
ಕ್ಷೇತ್ರ ತಂತ್ರಿ ದೇಲಂಪಾಡಿ ಗಣೇಶ ತಂತ್ರಿ ಧಾರ್ಮಿಕ ವಿಧಿ ನೆರವೇರಿಸಿದರು. ಮೇ 6ರಿಂದ 12ರ ತನಕ ನವೀಕರಣ, ಪುನಃಪ್ರತಿಷ್ಠಾಪನಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜರುಗಲಿದೆ.
ಉದ್ಯಮಿ ಗೋಪಾಲನ್ ಆರಿಕ್ಕಾಡಿ, ಸತ್ಯನಾರಾಯಣ ಹೊಳ್ಳ ಕಟೀಲು ಅವರನ್ನು ಕ್ಷೇತ್ರ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಪುತ್ತಿಗೆ ಗ್ರಾ.ಪಂ. ಅಧ್ಯಕ್ಷ ಡಿ.ಸುಬ್ಬಣ್ಣ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಆಡಳಿತ ಮೊಕ್ತೇಸರ ಬಿ.ಸುಬ್ಬಯ್ಯ ರೈ ಇಚ್ಲಂಪಾಡಿ, ಎಂ.ಶಂಕರ ರೈ ಮಾಸ್ತರ್, ಎಂ.ಎನ್.ಮಯ್ಯ ಕಾಟುಕುಕ್ಕೆ, ಪ್ರಧಾನ ಅರ್ಚಕ ಗೋಪಾಲಕೃಷ್ಣ ಅಡಿಗ, ಶ್ಯಾಮರಾಯ ಹೊಳ್ಳ, ಡಿ.ಎನ್.ರಾಧಾಕೃಷ್ಣ, ಶಿವಪ್ಪ ರೈ ಮೊದಲಾದವರು ಉಪಸ್ಥಿತರಿದ್ದರು. ಸೇವಾ ಸಮಿತಿ ಅಧ್ಯಕ್ಷ ದಾಮೋದರನ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಡಿ.ರಾಜೇಂದ್ರ ರೈ ವಂದಿಸಿದರು.