

ಚಿಕ್ಕನಾಯಕನಹಳ್ಳಿ : ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಸಿ.ಬಿ.ಸುರೇಶ್ ಬಾಬು ದಿಢೀರ್ ಭೇಟಿ ನೀಡಿ, ಸಾರ್ವಜನಿಕರ ಆರೋಗ್ಯ ವಿಚಾರಿಸುವುದರೊಂದಿಗೆ ಅಲ್ಲಿನ ವ್ಯವಸ್ಥೆಯ ಬಗ್ಗೆ ಚರ್ಚೆ ನಡೆಸಿ ತಮ್ಮ ಕಣ್ಣಿನ ಪರೀಕ್ಷೆ ಮಾಡಿಸಿಕೊಂಡು ಸಾರ್ವಜನಿಕ ಆಸ್ಪತ್ರೆಯ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸಿದರು.
ಬಳಿಕ ಮಾತನಾಡಿದ ಅವರು, ಈಗಾಗಲೇ ಗಣಿಬಾಧಿತ ಪ್ರದೇಶಾಭಿವೃದ್ಧಿ ಯೋಜನೆಯಡಿ ಸಾರ್ವಜನಿಕ ಆಸ್ಪತ್ರೆಗೆ ಅವಶ್ಯಕತೆ ಇರುವ ವಸ್ತುಗಳಿಗೆ ಒಟ್ಟು 13 ಕೋಟಿ ಅಂದಾಜು ಪಟ್ಟಿ ಸಿದ್ಧಪಡಿಸಿ ಅದರ ಅನುಮೋದನೆಗೆ ಸರ್ಕಾರದ ಮಟ್ಟಕ್ಕೆ ಕಳುಹಿಸಲಾಗಿದೆ. ಅನುದಾನ ಬಂದರೆ ನಮ್ಮ ಆಸ್ಪತ್ರೆಯನ್ನು ಇನ್ನೂ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಆಸ್ಪತ್ರೆಗೆ ಅಗತ್ಯವಾಗಿ ಬೇಕಾಗಿರುವ ಎಂಆರ್ಐ ಸ್ಕಾ$ನಿಂಗ್, ಸಿಟಿ ಸ್ಕಾ$ನಿಂಗ್ ಸೇರಿ ಇನ್ನೂ ಅನೇಕ ಅಭಿವೃದ್ಧಿ ಕೆಲಸ ಹಾಗೂ ಯಂತ್ರೋಪಕರಣಗಳನ್ನು ಆಳವಡಿಸಲಾಗುವುದು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಮಯಕ್ಕೆ ಸರಿಯಾಗಿ ಆಸ್ಪತ್ರೆಯಲ್ಲಿ ಹಾಜರಿದ್ದು, ರೋಗಿಗಳ ಬಗ್ಗೆ ಗಮನಿಸಿ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದೆರು.
ಆಸ್ಪತ್ರೆಯ ಎಲ್ಲ ವಾರ್ಡ್ಗಳಿಗೆ ಭೇಟಿ ನೀಡಿ ಎಲ್ಲ ವಿಭಾಗಗಳನ್ನು ವೀಕ್ಷಿಸಿ ಬಳಿಕ ತಮ್ಮ ಕಣ್ಣನ್ನು ವೈದ್ಯರಿಂದ ಪರೀಕ್ಷೆ ಮಾಡಿಸಿಕೊಂಡರು.