

ಸಾಗರ: ಇಡೀ ದೇಶದಲ್ಲಿಯೇ ಸ್ವತಂತ್ರ ಗ್ರಾಮ ಎಂದು ಘೋಷಿಸಿಕೊಂಡ ಶಿಕಾರಿಪುರ ತಾಲೂಕಿನ ಈಸೂರಿನ ಜನತೆಯ ಧೈರ್ಯ, ಸಾಹಸದಿಂದ ಬ್ರಿಟಿಷರನ್ನು ದಿಟ್ಟವಾಗಿ ಎದುರಿಸಲು ಸಾಧ್ಯವಾಯಿತು. ಅಂದು ಅವರು ನಡೆಸಿದ ಹೋರಾಟ, ಅಪ್ರತಿಮ ದೇಶಭಕ್ತಿ ಮತ್ತು ತ್ಯಾಗ ದೇಶದ ಪ್ರತಿಯೊಬ್ಬ ಪ್ರಜೆಗೂ ಮಾದರಿ ಎಂದು ಉಪವಿಭಾಗಾಽಕಾರಿ ಪಲ್ಲವಿ ಸಾತೇನಹಳ್ಳಿ ಹೇಳಿದರು.
ನಗರದ ನೆಹರು ಮೈದಾನದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ‍್ಯೋತ್ಸವದAದು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತ ವಿವಿಧತೆಯಲ್ಲಿ ಏಕತೆ ಸಾರಿದ ದೇಶ. ರಾಜ್ಯ ಸರ್ಕಾರ ಐದು ಗ್ಯಾರಂಟಿ ಮೂಲಕ ಜನಸಾಮಾನ್ಯರ ನೆರವಿಗೆ ನಿಂತಿದ್ದರೆ, ಕೇಂದ್ರ ಸರ್ಕಾರ ತನ್ನ ಪ್ರಬುದ್ಧ ರಾಜತಾಂತ್ರಿಕ ನೀತಿ ಮೂಲಕ ವಿಶ್ವಕ್ಕೆ ಮಾದರಿಯಾಗಿದೆ ಎಂದರು.
ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಬ್ರಿಟಿಷರ ಕಪಿಮುಷ್ಟಿಯಿಂದ ಭಾರತವನ್ನು ವಿಮುಕ್ತಿಗೊಳಿಸಿ ಹೋರಾಡಿದವರನ್ನು ಸದಾ ಸ್ಮರಿಸಬೇಕು ಎಂದರು.
ತಾಪA ಇಒ ನಾಗೇಶ್ ಬ್ಯಾಲದ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ಡಿವೈಎಸ್‌ಪಿ ಗೋಪಾಲಕೃಷ್ಣ ಟಿ. ನಾಯಕ್, ಕ್ಷೇತ್ರ ಶಿಕ್ಷಣಾಽಕಾರಿ ಪರಶುರಾಮ್ ಇತರರಿದ್ದರು.