

ದೇವದುರ್ಗ: ಮೂರು ಶತಮಾನ ಬ್ರಿಟಿಷ್ ಆಡಳಿತ ವಿರುದ್ಧ ಹೋರಾಟಗಾರರು ನಡೆಸಿದ್ದ ಸ್ವಾತಂತ್ರ್ಯ ಚಳವಳಿ ಅವಿಸ್ಮರಣೆ ಎಂದು ಕನ್ನಡ ವಿವಿ ಸಿಂಡಿಕೇಟ್ ಸದಸ್ಯ ನಾಗರಾಜ ಅಕ್ಕರಕಿ ಹೇಳಿದರು.
ಪಟ್ಟಣದಲ್ಲಿರುವ ಕನ್ನಡ ವಿಶ್ವವಿದ್ಯಾಲಯ ವಿಸ್ತಾರಣಾ ಕೇಂದ್ರದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ಹಲವು ಮಹನೀಯರ ತ್ಯಾಗ, ಬಲಿದಾನದ ಪ್ರತೀಕವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು, ಅದನ್ನು ನಾವು ಕಾಪಾಡಿಕೊಂಡು ಹೋಗಬೇಕಿದೆ. ಯುವ ಜನರು ರಾಷ್ಟ್ರಪ್ರೇಮ ಬೆಳೆಸಿಕೊಂಡು ದೇಶದ ಸಮಗ್ರ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.
ಪ್ರಾಚಾರ್ಯ ಶಾಂತಪ್ಪ ಡಂಬಳ ಧ್ವಜಾರೋಹಣ ಮಾಡಿದರು. ಕನ್ನಡ ವಿವಿ ಸಿಂಡಿಕೇಟ್ ಸದಸ್ಯ ಬಸವರಾಜ ಕೊಪ್ಪರ್, ಉಪನ್ಯಾಸಕ ರವಿ, ರಂಗನಾಥ ಕೊಂಬಿನ್, ಯಮನೂರಪ್ಪ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಇದ್ದರು.