'ಅಂದಂದಿನ ಪಾಠವನ್ನು ಅಂದಂದೇ ಓದಬೇಕು'

'Every day's lesson should be read like that'
Published on

ಮಡಿಕೇರಿ:

ಅಂದಂದಿನ ಪಾಠವನ್ನು ಅಂದಂದೇ ಓದಿಕೊಳ್ಳುವ ಅಭ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಮೈಸೂರು ಮಹಾರಾಜ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಸಿ.ಬಿ.ರಾಮಚಂದ್ರ ಹೇಳಿದರು. ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ೨೦೨೩-೨೪ನೇ ಸಾಲಿನ ಪ್ರತಿಭೋತ್ಸವ ಮತ್ತು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗುರುವಾರ ಮಾತನಾಡಿದರು.

ಪ್ರಾಧ್ಯಾಪಕರು ಮಾಡಿದ ಪಾಠವನ್ನು ಪ್ರತಿದಿನ ಓದಿಕೊಳ್ಳುವ ಅಭ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಜತೆಗೆ ಕ್ರೀಡೆ, ಯೋಗ, ಧ್ಯಾನ ಮಾಡುವುದರಿಂದ ಆರೋಗ್ಯ ಸದೃಢವಾಗಿರಿಸಿಕೊಳ್ಳಬೇಕು ಎಂದರು.

ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಡಾ.ಸೀನಪ್ಪ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಲ್ಲಿ ಗುರುತಿಸಿಕೊಳ್ಳಬೇಕಾದರೆ ಶಿಕ್ಷಣ ಬಹಳ ಅಗತ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮ ವಹಿಸಬೇಕು ಎಂದರು.

ಚಲನಚಿತ್ರ ನಿರ್ದೇಶಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಮಾತನಾಡಿ, ಹಿರಿಯರನ್ನು ಗೌರವಿಸುವ ಗುಣವನ್ನು ವಿದ್ಯಾರ್ಥಿಯಾಗಿದ್ದಾಗಲೇ ಬೆಳೆಸಿಕೊಳ್ಳಬೇಕು. ಉತ್ತಮ ಕಲಿಕೆಯೇ ಭವಿಷ್ಯ ರೂಪಿಸಿಕೊಳ್ಳಲು ದೊರಕುವ ಮೊದಲ ಮೆಟ್ಟಿಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್.ಧರ್ಮ ಮಾತನಾಡಿ, ಕೊಡಗಿಗೆ ಅದರದ್ದೇ ಆದ ಸ್ಥಾನಮಾನವಿದೆ. ಗೌರವದ ಸ್ಥಾನದಲ್ಲಿರುವ ಕೊಡಗಿನ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳು ಸಮಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮಲ್ಲಿ ’ಭೂರಮೆ’ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಲಾಯಿತು.

ಕೊಡವ ಎಂ.ಎ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‌್ಯಾಂಕ್ ಅಂಕಗಳಿಸಿದ ಹಿಬಾತುಲ್ ಬಾರಿ, ಎಂ.ಎ ಅರ್ಥಶಾಸ್ತ್ರದಲ್ಲಿ ಪ್ರಥಮ ಸ್ಥಾನ ಪಡೆದ ಕೆ.ಎ.ಗ್ರೀಷ್ಮಾ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಸಾಧನೆ, ಸಹಕಾರಕ್ಕಾಗಿ ಪಿ.ಎಲ್.ಧರ್ಮ, ಮುದ್ದಪ್ಪ, ಶಾಜಿ, ಪ್ರಮೋದ್ ರೈ ಇವರುಗಳನ್ನು ಸನ್ಮಾನಿಸಲಾಯಿತು. ಎನ್.ಎಸ್.ಎಸ್, ಎನ್.ಸಿ.ಸಿ, ಕ್ರೀಡೆ, ಸಾಂಸ್ಕೃತಿಕ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕೊಡಗು ವಿ.ವಿ.ಯ ಕುಲಪತಿ ಪ್ರೊ. ಅಶೋಕ ಸಂಗಪ್ಪ ಅಲೂರ, ಪ್ರಾಂಶುಪಾಲ ಮೇಜರ್ ಡಾ.ರಾಘವ, ಕಾಲೇಜಿನ ವಿದ್ಯಾರ್ಥಿ ಸಂಘದ ಸಲಹೆಗಾರ ಬಿ.ಎಚ್. ತಳವಾರ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net