ಮೊದಲ ಶನಿವಾರ ಸ್ವಚ್ಛತಾ ದಿನ
ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಕರೆ

Tmk_DC_new
Published on

ತುಮಕೂರು: ಪ್ರತೀ ತಿಂಗಳ ಮೊದಲ ಶನಿವಾರ ಸ್ವಚ್ಛತಾ ದಿನವೆಂದು ಪರಿಗಣಿಸಿ ಸರ್ಕಾರಿ ಕಟ್ಟಡಗಳ ಆವರಣಗಳನ್ನು ಶುಚಿಗೊಳಿಸಲು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಕರೆಯಿತ್ತರು.

ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸೋಮವಾರ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು, ಸ್ಥಳೀಯ ಸಂಸ್ಥೆಗಳು, ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಸರ್ಕಾರಿ ಕಟ್ಟಡಗಳ ಆವರಣಗಳನ್ನು ಶುಚಿಗೊಳಿಸಲು ಕ್ರಮವಹಿಸಬೇಕು ಎಂದು ಸೂಚಿಸಿದರು.

ಅಧಿಕಾರಿಗಳು ತಮ್ಮ ಕಚೇರಿಯನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಶಿಸ್ತು ಕಾಪಾಡಿಕೊಳ್ಳಬಹುದು ಮತ್ತು ಈ ಮೂಲಕ ಆಡಳಿತ ನಿಯಂತ್ರಣವನ್ನು ಸಹ ಹೊಂದಬಹುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net