ಪ್ರತಿಯೊಬ್ಬರೂ ರಕ್ತದಾನ ಮಾಡುವಂತೆ ಸಲಹೆ

h22-blood camp
Published on

ಹುಬ್ಬಳ್ಳಿ: ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಕಮ್ಯುನಿಟಿ ಡೆವಲಪ್‌ಮೆಂಟ್ ಸರ್ಕಲ್, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ರಾಷ್ಟ್ರೋತ್ಥಾನ ರಕ್ತ ಭಂಡಾರ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್ ಆಶ್ರಯದಲ್ಲಿ ನಗರದ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಬುಧವಾರ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ವಿಶ್ವವಿದ್ಯಾಲಯದ ಡೀನ್ ಡಾ. ಪ್ರಕಾಶ ತೆವರಿ ಅವರು ಚಾಲನೆ ನೀಡಿ ಮಾತನಾಡಿ, ರಕ್ತದ ಕೊರತೆ ಬಹಳಷ್ಟು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು. ಕನಿಷ್ಠ ಮೂರು ತಿಂಗಳಿಗೊಮ್ಮೆಯಾದರೂ ರಕ್ತದಾನ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ವಿನಂತಿಸಿದರು.
ವಿಶ್ವವಿದ್ಯಾನಿಲಯದ ಹೆಚ್ಚು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ರಕ್ತದಾನ ಮಾಡಿದರು. ಒಟ್ಟು 275 ಯೂನಿಟ್ ರಕ್ತ ಸಂಗ್ರಹವಾಯಿತು.
ಕಿಮ್ಸ್ ಪ್ಯಾಥಾಲಜಿ ವಿಭಾಗದ ಮುಖ್ಯಸ್ಥ ಡಾ. ಪುರುಷೋತ್ತಮರೆಡ್ಡಿ ಮಾತನಾಡಿ, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ, ಪ್ಲಾಸ್ಮಾ ಕೂಡ ದಾನ ಮಾಡಿ ಎಂದು ಸಲಹೆ ನೀಡಿದರು.
ಪ್ರಾಚಾರ್ಯ ವೀರೇಶ ಅಂಗಡಿ, ಡಾ. ಸಂಜಯ ಕೊಟಬಾಗಿ, ಎನ್‌ಎಸ್‌ಎಸ್ ಸಂಚಾಲಕ ಎಂ.ಎಂ. ಕುರಗೋಡಿ, ಪ್ರೊ. ವಿಜಯಕುಮಾರ, ಡಾ. ಪಂಡಿತಾರಾಧ್ಯ, ಕಿಮ್ಸ್ ಪ್ರಾಚಾರ್ಯ ಡಾ. ಈಶ್ವರ ಹೊಸಮನಿ, ಡಾ. ಭಾರತಿ ಭಾವಿಕಟ್ಟಿ, ಡಾ. ಕವಿತಾ ಏವೂರ, ಡಾ.ಎಸ್.ಎಸ್. ಗಂಗೊಳ್ಳಿ, ಡಾ.ಬಿ.ಬಿ. ಪಾಟೀಲ, ಶ್ರೀಕರ ಕೆರೆಕಾಯಿ, ರಾಷ್ಟ್ರೋತ್ಥಾನ ರಕ್ತ ಕೇಂದ್ರದ ಟ್ರಸ್ಟಿ ದತ್ತಮೂರ್ತಿ ಕುಲಕರ್ಣಿ,ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net