ಪರಿಸರ ಉಳಿದರೆ ಎಲ್ಲರಿಗೂ ಸುಖ

18 PARISARA
ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದ ಶ್ರೀ ಹಾಲಶಿವಯೋಗಿಶ್ವರ ಶಾಲೆ ಆವರಣದಲ್ಲಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡಲಾಯಿತು.
Published on

ಮುಂಡರಗಿ: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಪ್ರತಿಯೊಬ್ಬರೂ ಹೆಚ್ಚು ಗಿಡಗಳನ್ನು ಬೆಳೆಸಿ ಸಮೃದ್ಧ ಪರಿಸರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ವಿಶಾಲಾ ಮಲ್ಲಾಪುರ ಹೇಳಿದರು.

ತಾಲೂಕಿನ ಪೇಠಾಲೂರು ಗ್ರಾಮದ ಶ್ರೀ ಹಾಲ ಶಿವಯೋಗಿಶ್ವರ ಶಾಲೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪರಿಸರ ವಿಷಯ ಕುರಿತು ಮಕ್ಕಳಿಗೆ ಪ್ರಬಂಧ ಮಂಡನೆ ಮತ್ತು ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪರಿಸರ ಉಳಿದರೆ ಮಾತ್ರ ನಾವೆಲ್ಲರೂ ಸುಖ, ಆರೋಗ್ಯದಿಂದ ಇರುವುದಕ್ಕೆ ಸಾಧ್ಯ. ಪರಿಸರ ಉಳಿವಿಗೆ, ಸಂರಕ್ಷಣೆಗೆ ಮುಂದಾಗುವುದು ಅವಶ್ಯ ಎಂದರು. ಮುಖ್ಯಶಿಕ್ಷಕಿ ಶಕುಂತಲಾ ಕರಿಗೌಡರ ಅಧ್ಯಕ್ಷತೆ ವಹಿಸಿದ್ದರು. ವಲಯದ ಮೇಲ್ವಿಚಾರಕ ದಾದಾ ಖಲಂದರ್ ಮತ್ತು ತಾಲೂಕು ಕೃಷಿ ಮೇಲ್ವಿಚಾರಕ ಈರಣ್ಣ ಕುರಡಗಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net