ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಿ

Everyone must vote
ಇಳಕಲ್ಲ ತಾಲೂಕಿನ ನಂದವಾಡಗಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ತಾಪಂ ಅಧಿಕಾರಿ ಮುರಳೀಧರ ದೇಶಪಾಂಡೆ, ನಂದವಾಡಗಿ, ಶ್ರೀಮಠದ ಡಾ. ಚನ್ನಬಸವದೇವರು, ಸರಸ್ವತಿ ಈಟಿ ಇತರರಿದ್ದರು.
Published on

ಇಳಕಲ್ಲ: ತಾಲೂಕಿನ ನಂದವಾಡಗಿಯಲ್ಲಿ ತಾಲೂಕು ಆಡಳಿತ ಮತ್ತು ಗ್ರಾಪಂ ವತಿಯಿಂದ ಲೋಕಸಭೆ ಚುನಾವಣೆ 2024ರ ಪ್ರಯುಕ್ತ ಮತದಾರರಿಗೆ ಮತದಾನದ ಜಾಗೃತಿ ಕಾರ್ಯಕ್ರಮ ಮಂಗಳವಾರ ಸಂಜೆ ನಡೆಯಿತು.

ತಾಪಂ ಅಧಿಕಾರಿ ಮುರಳೀಧರ ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಿಮ್ಮ ಜಿಲ್ಲೆಯ ಸಂಸದರನ್ನು ಆಯ್ಕೆ ಮಾಡುವ ಜವಾಬ್ದಾರಿ ನಿಮ್ಮ ಮೇಲಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಸಲಹೆ ನೀಡಿದರು.

ನಂದವಾಡಗಿ ಶ್ರೀಮಠದ ಡಾ. ಚನ್ನಬಸವದೇವರು ಸಾನ್ನಿಧ್ಯ ವಹಿಸಿದ್ದರು. ಮತದಾನದ ಕುರಿತು ಕಿರು ನಾಟಕ ಹಾಗೂ ಕ್ಯಾಂಡಲ್ ಮೂಲಕ ಸಂಘದ ಸದಸ್ಯರಿಗೆ ಮಾಹಿತಿ ಹೇಳಲಾಯಿತು.

ರಂಗೋಲಿ ಸ್ಪರ್ಧೆಯಲ್ಲಿ ಮತದಾನ ಜಾಗೃತಿ ಮೂಡಿಸುವ ರಂಗೋಲಿ ಹಾಕಿದ ಸ್ಪರ್ಧೆಗಳಿಗೆ ಪ್ರಥಮ ಸ್ಥಾನ, ದ್ವಿತೀಯ ಹಾಗೂ ತೃತೀಯ ಸ್ಥಾನ ಆಯ್ಕೆ ಮಾಡಿ ಪ್ರಶಸ್ತಿ ನೀಡಲಾಯಿತು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಐಇಸಿ ಸಂಯೋಜಕರು, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು, ಗ್ರಾಪಂ ಸಿಬ್ಬಂದಿ, ಶ್ರೀನಿಧಿ ಸಂಜೀವಿನಿ ಒಕ್ಕೂಟದ ವ್ಯಾಪ್ತಿಯಡಿ ಬರುವ ಸ್ವಸಹಾಯ ಸಂಘದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net