ಪ್ರತಿಯೊಬ್ಬರಿಗೂ ಸಾಮಾಜಿಕ ಸ್ವಾತಂತ್ರೃ ಅಗತ್ಯ

Oplus_16908288
Oplus_16908288
Published on

ನಂಜನಗೂಡು: ದೇಶದಲ್ಲಿ ರಾಜಕೀಯ ಸ್ವಾತಂತ್ರೃಕ್ಕಿಂತ ಸಾಮಾಜಿಕ ಸ್ವಾತಂತ್ರೃಬೇಕಾಗಿದೆ ಎಂದು ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್ ಅಭಿಪ್ರಾಯಪಟ್ಟರು.

ನಗರದ ಶ್ರಾವಣ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂವಿಧಾನದ ಆಶಯಗಳು ಮತ್ತು ಬಹುತ್ವದ ಭಾರತಕ್ಕಿರುವ ಸವಾಲುಗಳು ಎಂಬ ಜನ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲರಿಗೂ ಸಮಾನತೆಯ ಸ್ವಾತಂತ್ರೃ ಸಿಗಬೇಕು. ಸಮಾನತೆ ಹುಟ್ಟಿದರೆ ಭ್ರಾತೃತ್ವ ಬೆಳೆಯುತ್ತದೆ ಎಂದರು.

ಬಸವಣ್ಣನವರ ಕಾಲಘಟ್ಟದಲ್ಲಿ ಲಿಂಗ ತಾರತಮ್ಯಯನ್ನು ಹೋಗಲಾಡಿಸಿ ಸಮಾನತೆಯ ಸಮಾಜ ನಿರ್ಮಾಣವಾಗಿತ್ತು. ಜಾತ್ಯತೀತ ಎನ್ನುವುದು ಎಲ್ಲ ಸಮುದಾಯವನ್ನು ಒಳಗೊಳ್ಳುತ್ತದೆ. ಎಲ್ಲರ ಏಳಿಗೆಗೆ ಸಹಕಾರಿಯಾಗುತ್ತದೆ. ಹಿಂದು ರಾಷ್ಟ್ರ ಮಾಡುವ ಹುನ್ನಾರ ನಡೆಸಲಾಗುತ್ತಿದ್ದು, ಧರ್ಮದ ಪ್ರತಿಪಾದನೆಯಲ್ಲಿ ಮೇಲು, ಕೀಳು, ಆಹಾರ ಸೇವನೆಯಲ್ಲೂ ಹಕ್ಕನ್ನು ಕಿತ್ತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತದಲ್ಲಿ ಏಕ ಭಾಷೆ, ಒಂದೇ ಧರ್ಮವನ್ನು ಏರಲು ಸಾಧ್ಯವಿಲ್ಲ. ಸಂವಿಧಾನದ ಆಶಯಗಳನ್ನು ಪಾಲಿಸಬೇಕು. ಪ್ರತಿ ಗ್ರಾಮಗಳಲ್ಲಿ ಸಂವಿಧಾನದ ಆಶಯಗಳನ್ನು ಗೌರವಿಸಿ ಭಾರತದ ಸಂವಿಧಾನವನ್ನು ಕಾಪಾಡಿಕೊಳ್ಳುವ ಜವಾಬ್ದಾರಿಯನ್ನು ಎಲ್ಲರೂ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ, ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್, ಜಿಲ್ಲಾ ಸಂಘಟನಾ ಸಂಚಾಲಕರಾದ ಶಂಭುಲಿಂಗಸ್ವಾಮಿ, ಹೆಗ್ಗನೂರು ನಿಂಗರಾಜು, ಖಜಾಂಚಿ ಬಿ.ಡಿ ಶಿವಬುದ್ದಿ, ಉಪವಿಭಾಗೀಯ ಸಂಚಾಲಕ ಮಂಜು ಶಂಕರಪುರ, ಸಂಘಟನಾ ಸಂಚಾಲಕ ಕೃಷ್ಣಮೂರ್ತಿ ಬಸವಟ್ಟಿಗೆ, ತಾಲೂಕು ಸಂಚಾಲಕ ಗಟ್ಟವಾಡಿ ಮಹೇಶ್, ತಾಲೂಕು ಸಂಘಟನಾ ಸಂಚಾಲಕರಾದ ಸುರೇಶ್, ನಟರಾಜು, ಗಜೇಂದ್ರ, ಮರಿಸ್ವಾಮಿ, ಹೊಳೆಯಪ್ಪ, ಸಿದ್ದರಾಜು, ಬೆಳಲೆ ಮಹೇಶ್ ಇದ್ದರು..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net