

ಧಾರವಾಡ: ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕಾನೂನಿನ ತಿಳಿವಳಿಕೆ ಹೊಂದಬೇಕು ಎಂದು ರಾಜ್ಯ ಕಾನೂನು ವಿಶ್ವವಿದ್ಯಾಲಯ ಕುಲಪತಿ ಡಾ. ಸಿ. ಬಸವರಾಜು ಹೇಳಿದರು.
ನಗರದ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ಹುರಕಡ್ಲಿ ಅಜ್ಜ ಕಾನೂನು ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಿದ್ಯಾರ್ಥಿ ಒಕ್ಕೂಟ, ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಉಪಾಧ್ಯಕ್ಷ ವಿ.ಬಿ. ಯಳಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಪರಿಶ್ರಮ ಮತ್ತು ನಿಷ್ಟೆಯಿಂದ ಅಭ್ಯಸಿಸಬೇಕು ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಸವಿತಾ ಎಲ್. ಪಾಟೀಲ ಸ್ವಾಗತಿಸಿದರು. ಸಂಸ್ಥೆಯ ಅಧ್ಯಕ್ಷ ಆರ್.ಯು. ಬೆಳ್ಳಕ್ಕಿ, ಗೌರವ ಕಾರ್ಯದರ್ಶಿ ಸಿ.ಬಿ. ಮಟ್ಟಿ ವೇದಿಕೆಯಲ್ಲಿದ್ದರು. ಜಿಮಖಾನಾ ಕಾರ್ಯಾಧ್ಯಕ್ಷ ಡಾ. ಎಸ್.ಎಸ್. ಗಾಳಿಮಠ ವಾರ್ಷಿಕ ವರದಿ ಮಂಡಿಸಿದರು. ರಾಕೇಶ ಬಸಾಪುರ ಪರಿಚಯಿಸಿದರು.
ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಎಸ್.ಎಸ್. ಪಾಟೀಲ, ಬಿ.ಬಿ. ಸಂತೋಜಿ ಹಾಗೂ ಶಿಕ್ಷಕೇತರ ಸಿಬ್ಬಂದಿ ಇದ್ದರು. ವಿ. ಹೊಂಗಲ ನಿರೂಪಿಸಿದರು. ಉತ್ತಂಗಿ ಕೋಟ್ರೇಶ ವಂದಿಸಿದರು.