

ಚಿಕ್ಕೋಡಿ: ಡಾ.ಬಿ.ಆರ್.ಅಂಬೇಡ್ಕರ್ ಬದುಕು ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ ಎಂದು ಮಹಾಂತೇಶ ಕವಟಗಿಮಠ ಸೌಹಾರ್ದ ಸಹಕಾರಿ ಅಧ್ಯ ಶರತಚಂದ್ರ ಕವಟಗಿಮಠ ಹೇಳಿದರು.
ಪಟ್ಟಣದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಸೋಮವಾರ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆದು ಸಂವಿಧಾನವನ್ನು ಗೌರವಿಸುವ ಕೆಲಸ ಮಾಡಬೇಕು. ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಿ ಎಂದರು. ಸಿಎಲ್ಇ ಶಿಣ ಸಂಸ್ಥೆಯ ನಿರ್ದೇಶಕ ಮಲ್ಲಿಕಾರ್ಜುನ ಕವಟಗಿಮಠ, ಮಹಾಂತೇಶ ಕವಟಗಿಮಠ ಸೌಹಾರ್ದ ಸಹಕಾರಿಯ ಚಿಕ್ಕೋಡಿ ಶಾಖೆಯ ಅಧ್ಯ ಚಂದ್ರಶೇಖರ ಅರಭಾಂವಿ, ಪ್ರವಿಣ ಕಾಂಬಳೆ, ಸಂತೋಷ ಜೋಗಳೆ, ನಾಗರಾಜ ಮೇದಾರ ಇತರರಿದ್ದರು.