

ಶ್ರೀರಂಗಪಟ್ಟಣ: ಸೊಳ್ಳೆ ಉತ್ಪತ್ತಿ ತಾಣಗಳ ಬಗ್ಗೆ ಎಲ್ಲರೂ ಜಾಗೃತಿ ವಹಿಸಿ ಡೆಂೆ ತಡೆಗಟ್ಟಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಹೇಳಿದರು.
ಪಟ್ಟಣದ ಗಂಜಾಂನ ಸರ್ಕಾರಿ ಪ್ರೌಢ ಶಾಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಹಾಗೂ ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಡೆಂೆ ಜ್ವರ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಿರ್ದಿಷ್ಟ ಚಿಕಿತ್ಸೆ ಇಲ್ಲದ ಡೆಂೆ ಜ್ವರಕ್ಕೆ ಮುಂಜಾಗ್ರತೆಯೇ ಪರಮೌಷಧಿಯಾಗಿದ್ದು, ಡೆಂೆ ಹಾಗೂ ಚಿಕೂನ್ ಗುನ್ಯಾ ಜ್ವರಗಳು ಸೋಂಕು ಹೊಂದಿದ ಸೊಳ್ಳೆಯ ಕಡಿತದಿಂದ ಬರುತ್ತವೆ. ನಿಂತ ನೀರಿನಲ್ಲಿ ಹುಟ್ಟುವ ಈ ಸೊಳ್ಳೆ ಸಾಧಾರಣವಾಗಿ ಹಗಲಿನಲ್ಲಿ ಕಚ್ಚುತ್ತದೆ. ಹಠಾತ್ತನೆ ಬರುವ ಅಧಿಕ ಜ್ವರ, ತೀವ್ರ ತಲೆನೋವು, ಕಣ್ಣುಗಳ ಹಿಂಭಾದಲ್ಲಿ ತೀವ್ರತರ ನೋವು, ವಾಕರಿಕೆ ಮತ್ತು ವಾಂತಿ ರೋಗದ ಲಕ್ಷಣಗಳಾಗಿವೆ. ಈ ಲಕ್ಷಣಗಳು ಕಂಡಾಗ ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷಿಸಿಕೊಳ್ಳಿ. ಜತೆಗೆ ಸೊಳ್ಳೆಗಳ ಉತ್ಪತ್ತಿ ತಾಣಗಳಾದ ಟೈರ್‌ಗಳು, ತೆಂಗಿನ ಚಿಪ್ಪುಗಳು, ಸಿಮೆಂಟ್ ತೊಟ್ಟಿಗಳು, ತೆರೆದ ಪ್ಲಾಸ್ಟಿಕ್ ವಸ್ತುಗಳು, ನೀರಿನ ಸಂಗ್ರಹಣ ತೊಟ್ಟಿ, ಹೂವಿನ ಕುಂಡಗಳು, ಏರಕೂಲರ್ ಇತ್ಯಾದಿಗಳಲ್ಲಿ ಸೊಳ್ಳೆಗಳು ಉತ್ಪತ್ತಿ ಆಗುತ್ತವೆ. ಇವುಗಳನ್ನು ವಾರಕೊಮ್ಮೆ ಸ್ವಚ್ಛಗೊಳಿಸಬೇಕು. ಶಾಲಾ ಆವರಣವನ್ನು ಈಡಿಸ್ ಸೊಳ್ಳೆ ಉತ್ಪತ್ತಿ ರಹಿತ ಮಾಡುವ ಕುರಿತು ವಿಜ್ಞಾನ ಶಿಕ್ಷಕರಿಗೆ ಮನವಿ ಮಾಡಿದರು.
ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಸಿ.ಚಂದನ್ ಮಾತನಾಡಿ, ಸೊಳ್ಳೆಗಳು ಕಚ್ಚದಂತೆ ಮೈತುಂಬ ಬಟ್ಟೆ ಧರಿಸುವುದು ಸೇರಿದಂತೆ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ ತಪ್ಪದೆ ವಾರಕ್ಕೊಂದು ದಿನ ಒಣ ದಿನ ಆಚರಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಸದರಿ ವೇಳೆ ಮುಖ್ಯ ಶಿಕ್ಷಕ ಬಸವರಾಜು, ಶಿಕ್ಷಕರಾದ ಶ್ರೀನಿವಾಸ್ ಬಿ.ಚಂದ್ರಮ್ಮ, ಕುಮುದ್ವತಿ, ಪಿ.ಕೆ.ಸುಮಾ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಹದೇವಮ್ಮ ಇದ್ದರು.