

ಹನೂರು: ಮನೆ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರ ಮೂಲಕ ಡೆಂೆ ಜ್ವರ ಬಾರದಂತೆ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕು ಎಂದು ಜಿಲ್ಲಾ ರೋಗವಾಹಕಗಳ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ರಾಜೇಶ್‌ಕುಮಾರ್ ತಿಳಿಸಿದರು.
ಪಟ್ಟಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಡೆಂೆ ದಿನಾಚರಣೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಸೊಳ್ಳೆಗಳ ಕಡಿತದಿಂದ ಕಾಣಿಸಿಕೊಳ್ಳುವ ಡೆಂೆ ಜ್ವರ ಹೆಚ್ಚಾಗಿ ಜುಲೈನಲ್ಲಿ ಕಾಣಿಸಿಕೊಳ್ಳುತ್ತದೆ. ರೋಗ ಕಾಣಿಸಿಕೊಂಡಾಗ ನಿರ್ಲಕ್ಷೃ ವಹಿಸಿದರೆ ಆರೋಗ್ಯದ ದುಷ್ಪರಿಣಾಮ ಬೀರಲಿದೆ. ಆದ್ದರಿಂದ ಪ್ರತಿಯೊಬ್ಬರೂ. ಈ ಬಗ್ಗೆ ಮನದಟ್ಟು ಮಾಡಿಕೊಂಡು ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.
ಕೊಳಚೆ ನೀರು ಸಂಗ್ರಹವಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು. ಸೊಳ್ಳೆಗಳ ಆವಾಸ ಸ್ಥಾನವಾಗಿರುವ ನೀರು ಸಂಗ್ರಹಿಸುವ ತೊಟ್ಟಿ, ಡ್ರಮ್‌ಗಳನ್ನು ಸದಾ ಮುಚ್ಚಿಡಬೇಕು. ವಾರಕ್ಕೊಮ್ಮೆ ಶುಚಿಗೊಳಿಸಿ ನೀರನ್ನು ಸಂಗ್ರಹಿಸಿಕೊಳ್ಳಬೇಕು. ಹಾಗೆಯೇ ಬಯಲಿನಲ್ಲಿನ ಟಯರ್, ಎಳನೀರಿನ ಚಿಪ್ಪುಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು. ಆ ಮೂಲಕ ಡೆಂೆ ಜ್ವರ ತಗುಲದಂತೆ ಎಚ್ಚರ ವಹಿಸಬೇಕು. ಒಂದು ವೇಳೆ ಜ್ವರ ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ಅಗತ್ಯ ಚಿಕಿತ್ಸೆ ಹಾಗೂ ಸಲಹೆ ಪಡೆಯಬೇಕು ಎಂದು ತಿಳಿಸಿದರು.
ಬಳಿಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸುವ ಮೂಲಕ ಡೆಂೆ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್, ವೈದ್ಯರಾದ ಡಾ.ಮನು, ಡಾ. ಕಿಶೋರ್, ಡಾ.ಅನುರಾಗ್, ಡಾ. ರಾಜೇಶ್, ಡಾ. ಉಲ್ಲಾಸ್, ಡಾ. ಮಹೇಂದ್ರ ಎಎಸೈ ಶಿವರಾಜು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.