ಕನ್ನಡ ಭಾಷೆಯನ್ನು ಎಲ್ಲರೂ ಪ್ರೀತಿಸಿ, ಗೌರವಿಸಿ

5-kollegal-2,,,)
ಕೊಳ್ಳೇಗಾಲಕ್ಕೆ ಆಗಮಿಸಿದ್ದ ಕನ್ನಡ ರಥಯಾತ್ರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸೆಸ್ಕ್ ಎಇಇ ರಾಜು ಹಾಗೂ ಸಿಬ್ಬಂದಿ ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು.
Published on

ಕೊಳ್ಳೇಗಾಲ: ಕನ್ನಡ ಭಾಷೆಯನ್ನು ಎಲ್ಲರೂ ಪ್ರೀತಿಸಿ, ಗೌರವಿಸಬೇಕು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳಾದ ನಾವು ಕನ್ನಡ ಪ್ರಜ್ಞೆಯನ್ನು ಹೆಚ್ಚು ಬೆಳೆಸಬೇಕು ಎಂದು ಕೊಳ್ಳೇಗಾಲ ಸೆಸ್ಕ್ ಎಇಇ ಎಂ.ರಾಜು ತಿಳಿಸಿದರು.

ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕೊಳ್ಳೇಗಾಲಕ್ಕೆ ಆಗಮಿಸಿದ್ದ ಕನ್ನಡ ರಥಯಾತ್ರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಜತೆಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಕನ್ನಡಿಗರಾದ ನಾವು ಎಲ್ಲ ರಂಗಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಬೇಕು. ಯುವ ಪೀಳಿಗೆ ಅನ್ಯ ಭಾಷೆಗೆ ಹೆಚ್ಚು ಆಕರ್ಷಿತರಾಗದೆ ಮಾತೃ ಭಾಷೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕೆಲಸ ಶ್ರಮಿಸಬೇಕೆಂದು ತಿಳಿಸಿದರು.

ಬುಧವಾರ ಲೋಕೋಪಯೋಗಿ ಅತಿಥಿಗೃಹ ಆವರಣಕ್ಕೆ ಆಗಮಿಸಿದ್ದ ಕನ್ನಡ ರಥಯಾತ್ರೆ ಗುರುವಾರ ಪಟ್ಟಣದ ಪ್ರಮುಖ ರಸ್ತೆಯಗಳಲ್ಲಿ ಸಂಚರಿಸಿತು. ನಂತರ ರಥಯಾತ್ರೆಯನ್ನು ಯಳಂದೂರು ತಾಲೂಕಿನ ಕಡೆಗೆ ಬೀಳ್ಕೊಡಲಾಯಿತು. ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಹಾಗೂ ಸೆಸ್ಕ್ ಸಿಬ್ಬಂದಿ ಸಮವಸ್ತ್ರ ಧರಿಸಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಕೊಳ್ಳೇಗಾಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜು ಮತ್ತು ಪದಾಧಿಕಾರಿಗಳು ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net