ಪ್ರತಿಯೊಬ್ಬರೂ ಸಸಿ ನೆಟ್ಟು ಪೋಷಿಸಿ

24 upbr 2-Parisara Dinacharane
Published on

ಉಪ್ಪಿನಬೆಟಗೇರಿ: ಹಸಿರೇ ಉಸಿರಾಗಿರುವುದರಿಂದ ಪ್ರತಿಯೊಬ್ಬರೂ ಒಂದೊಂದು ಸಸಿಗಳನ್ನು ನೆಡುವುದರ ಮೂಲಕ ಪೋಷಣೆ ಮಾಡಿ ಮುಂದಿನ ಪೀಳಿಗೆಗೆ ಶುದ್ಧ ಆಮ್ಲಜನಕ ದೊರೆಯುವಂತೆ ಮಾಡಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧಾರವಾಡ ವಿಭಾಗದ ಪ್ರಾದೇಶಿಕ ನಿರ್ದೇಶಕಿ ದಯಾಶೀಲ ಹೇಳಿದರು.

ಧಾರವಾಡ ತಾಲೂಕಿನ ಮಾರಡಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ ಮತ್ತು ಗಿಡ ನಾಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ಬಂಡಿವಾಡ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಪರಿಸರ ಜಾಗೃತಿಗೆ ರಾಜ್ಯಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಸ್ವಚ್ಛ, ಸುಂದರ ಹಾಗೂ ಒಳ್ಳೆಯ ಪರಿಸರಕ್ಕೆ ಮತ್ತೊಂದು ಹೆಸರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂದರು.

ರೈತ ಮುಖಂಡ ಗಂಗಾಧರ ಪಾಟೀಲ ಕುಲಕರ್ಣಿ, ಗ್ರಾಪಂ ಉಪಾಧ್ಯಕ್ಷೆ ಜ್ಯೋತಿ ಗುರುನಾಥಗೌಡ ಗೌಡರ, ಕೃಷಿ ಮೆಲ್ವೀಚಾರಕ ಪ್ರಭು ಹಿರೇಮಠ, ತಾಲೂಕು ಯೋಜನಾಧಿಕಾರಿ ಅಶೋಕ ಕೆ., ದ್ಯಾಮಣ್ಣ ಹುಡೇದ, ಗಿರಿಜವ್ವ ಕೊಪ್ಪದ, ಶಾಲಾ ಸುಧಾರಣಾ ಸಮಿತಿ ಸದಸ್ಯ ಫಕೀರಪ್ಪ ವನಹಳ್ಳಿ, ಮುಖ್ಯಾಧ್ಯಾಪಕ ಕೆ.ಎಸ್. ಕುಲಕರ್ಣಿ, ವಲಯ ಮೆಲ್ವೀಚಾರಕಿ ಶಿಲ್ಪಾ ಪಾಟೀಲ, ಸೇವಾ ಪ್ರತಿನಿಧಿ ಲಕ್ಷ್ಮೀ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net