ಪ್ರತಿಯೊಬ್ಬರೂ ಕಣ್ಣಿನ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಿ

16-kollegalphoto-1,
Published on

 ಕೊಳ್ಳೇಗಾಲ: ಕಣ್ಣಿನ ಸಂರಕ್ಷಣೆ ಬಗ್ಗೆ ಪ್ರತಿಯೊಬ್ಬರೂ ಹೆಚ್ಚು ಕಾಳಜಿ ವಹಿಸಬೇಕು ಎಂದು ನೇತ್ರ ತಜ್ಞೆ ಡಾ.ಅರ್ಚಿತಾ ಹೇಳಿದರು.

ಪಟ್ಟಣದ ಲಯನ್ಸ್ ಸಮುದಾಯದ ಭವನದಲ್ಲಿ ಭಾನುವಾರ ಲಯನ್ಸ್ ಕ್ಲಬ್ ಆಯೋಜಿಸಿದ್ದ ಕಣ್ಣಿನ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಹದ ಅಂಗಾಂಗಗಳಲ್ಲಿ ಕಣ್ಣಿನ ಭಾಗ ಸೂಕ್ಷ್ಮವಾಗಿದೆ. ಹಾಗಾಗಿ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಕಣ್ಣಿನ ಸಮಸ್ಯೆ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ಸಕಾಲಕ್ಕೆ ತಪಾಸಣೆ ಹಾಗೂ ಚಿಕಿತ್ಸೆ ಪಡೆಯದಿದ್ದರೆ ತೊಂದರೆ ಅನುಭವಿಸಬೇಕಾಗುತ್ತದೆ. ಲಯನ್ಸ್ ಕ್ಲಬ್ ವತಿಯಿಂದ ನಿರಂತರವಾಗಿ ಕಣ್ಣಿನ ತಪಾಸಣೆ ಶಿಬಿರವನ್ನು ಆಯೋಜನೆ ಮಾಡಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಎಸ್.ನಾಗರಾಜು ಕೊಂಗರಹಳ್ಳಿ ಮಾತನಾಡಿ, ನಮ್ಮ ಲಯನ್ಸ್ ಕ್ಲಬ್ ಸುಮಾರು 231 ಕಣ್ಣಿನ ಶಿಬಿರವನ್ನು ಉಚಿತವಾಗಿ ನಡೆಸಲಾಗಿದೆ. ಇದರಲ್ಲಿ 1,04,84 ಜನರು ಚಿಕಿತ್ಸೆಗೆ ಒಳಪಟ್ಟಿದ್ದಾರೆ. ಈ ಪೈಕಿ 15,078 ಜನರು ಶಸ್ತ್ರ ಚಿಕಿತ್ಸೆಗೆ ಸೌಲಭ್ಯವನ್ನು ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ಲಯನ್ಸ್ ಕ್ಲಬ್ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ಬಡ ಜನರಿಗೆ ಉಪಯೋಗ ಪಡೆದುಕೊಳ್ಳ ಬೇಕೆಂದು ಕಣ್ಣಿನ ತಪಾಸಣಾ ಶಿಬಿರವನ್ನು ಪ್ರತಿ ತಿಂಗಳು ಆಯೋಜನೆ ಮಾಡಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಶಿಬಿರದ ಪ್ರಯೋಜನವನ್ನು ಪಡೆದು ಕೊಳ್ಳಬೇಕು ಎಂದರು.

ಶಿಬಿರದಲ್ಲಿ ಒಟ್ಟು 32 ಜನರು ಚಿಕಿತ್ಸೆಗೆ ಒಳಪಟ್ಟರು. ಇವರಲ್ಲಿ 25 ಜನರು ಶಸ್ತ್ರಚಿಕಿತ್ಸೆಗೆ ಬೆಂಗಳೂರಿನ ಲಯನ್ ವೆಸ್ಟ್ ಐ ಆಸ್ಪತ್ರೆಗೆ ಕಳುಹಿಸಿ ಕೊಡಲಾಯಿತು.

ಲಯನ್ಸ್ ಕ್ಲಬ್ ಅಧ್ಯಕ್ಷ ಚಿಕ್ಕಬಸವಯ್ಯ, ಪದಾಧಿಕಾರಿ ಪಿ.ಮಂಜುನಾಥ್, ಆನಂದ್ ರಾಮ ಶೆಟ್ಟಿ, ಜಯಪ್ರಕಾಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net