ಪರಿಸರ ಕಾಪಾಡಲು ಪ್ರತಿಯೊಬ್ಬರು ಪ್ರಯತ್ನಿಸಿ

5 vikram 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಇಂದಿನ ಋತುಗಳ ವ್ಯತ್ಯಾಸದಲ್ಲಿ, ತಾಪಮಾನದ ಹೆಚ್ಚಳದಲ್ಲಿ ಪರಿಸರದ ಪಾತ್ರ ಮುಖ್ಯ. ಸ್ವಚ್ಛ, ಸುಂದರ, ಹಸಿರು ಪರಿಸರ ಕಾಪಾಡಲು ಪ್ರತಿಯೊಬ್ಬರು ಪ್ರಯತ್ನಿಸಬೇಕು. ಮಕ್ಕಳಲ್ಲಿ ಹಸಿರು ಪರಿಸರ ಪ್ರೀತಿ ಹೆಚ್ಚಿಸಲು, ಬಾಂಧವ್ಯ ಬೆಳೆಸಲು ಮಕ್ಕಳೊಂದಿಗೆ ಮನೆ ಆವರಣದಲ್ಲಿ ಮರ&ಗಿಡ ಬೆಳೆಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಬ್ಬಂದಿ ಹಾಗೂ ಶಾಲಾ ಮಕ್ಕಳೊಂದಿಗೆ ಬುಧವಾರ ಏರ್ಪಡಿಸಿದ್ದ ಪರಿಸರ ದಿನ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತೀಯ ಪರಂಪರೆ, ಸಂಪ್ರದಾಯಗಳಲ್ಲಿ ಗಿಡ, ಮರಗಳಿಗೆ, ಕಾಡಿಗೆ ವಿಶೇಷ ಸ್ಥಾನ ನೀಡಲಾಗಿದೆ. ಪ್ರತಿ ದೇವಸ್ಥಾನದಲ್ಲಿ ಒಂದು ಸ್ಥಾನಿಕ ಮರವಾಗಿದ್ದು ಪೂಜೆಗೊಳ್ಳುತ್ತದೆ. ಇದು ನಂಬಿಕೆ ಮಾತ್ರವಲ್ಲ. ಇದರಲ್ಲಿ ಆರೋಗ್ಯ, ವಿಜ್ಞಾನ ಅಡಗಿದೆ. ವಿದ್ಯಾಥಿರ್ ಜೀವನದಿಂದ ಗಿಡ, ಮರಗಳ ಬಗ್ಗೆ ಪ್ರೀತಿ ವಿಶ್ವಾಸ ಬೆಳೆಸಿದರೆ ಭವಿಷ್ಯದಲ್ಲಿ ಹಸಿರು ಪರಿಸರ, ಕಾಡು ಕಾಪಾಡಲು ಸಾಧ್ಯ ಎಂದರು.
ನಗರದ ಬಾಲಬಳಗ ಶಾಲಾ ಮಕ್ಕಳು ಜಾಗೃತಿ ಜಾಥಾ ಮೂಲಕ ಜನರು ಇತರ ಶಾಲಾ ಮಕ್ಕಳಲ್ಲಿ ಪರಿಸರ ಕಾಳಜಿ ಮೂಡಿಸಿದ್ದಲ್ಲದೆ, ಉಚಿತ ಸಸಿಗಳನ್ನು ವಿತರಿಸಿ ಮೂಲಕ ಮಾದರಿಯಾಗಿದ್ದಾರೆ. ಈ ಕಾರ್ಯಕ್ಕೆ ಜಿಲ್ಲಾಧಿಕಾರಿ ಸಹ ಅಭಿನಂದನೆ ಸಲ್ಲಿಸಿದರು.
ನಂತರ ಶಾಲಾ ಮಕ್ಕಳು ನೀಡಿದ ಸಸಿಗಳನ್ನು ಮಕ್ಕಳೊಂದಿಗೆ ಜಿಲ್ಲಾಧಿಕಾರಿ ಅವರು ಕಚೇರಿ ಆವರಣದಲ್ಲಿ ನೆಟ್ಟು ನೀರುಣಿಸಿದರು. ಬಾಲಬಳಗ ಸಂಸ್ಥೆ ಮುಖ್ಯಸ್ಥ ಡಾ. ಸಂಜೀವ ಕುಲಕಣಿರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪಿ.ಶುಭ, ಜಿಲ್ಲಾಡಳಿತ ಸಿಬ್ಬಂದಿ, ಅಧಿಕಾರಿಗಳು, ಬಾಲಬಳಗ ಶಾಲೆ ಶಿಕ್ಷಕರು, ವಿದ್ಯಾಥಿರ್ಗಳು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net