ಅಕ್ರಮ ತಡೆಗೆ ಎಲ್ಲರ ಸಹಕಾರ ಅಗತ್ಯ

jagruthi
Published on

ನರೇಗಲ್ಲ: ಸಮಾಜದಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಸಾಗಾಟ ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ ಜತೆಗೆ ಸಾರ್ವಜನಿಕರು, ಪಾಲಕರು ಸೇರಿದಂತೆ ಯುವಜನತೆಯ ಸಹಕಾರ ಅತ್ಯವಶ್ಯಕವಾಗಿದೆ ಎಂದು ಮುಖ್ಯಶಿಕ್ಷಕ ಎಸ್.ಎನ್. ಹೂಲಗೇರಿ ಹೇಳಿದರು.

ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಪಟ್ಟಣದ ಶ್ರೀ ಅನ್ನದಾನ ವಿಜಯ ಬಾಲಕಿಯರ ಪ್ರೌಢಶಾಲೆ ವತಿಯಿಂದ ಗುರುವಾರ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಭವಿಷ್ಯದ ಉತ್ತಮ ಪ್ರಜೆಗಳಾಗಲು ಹಾಗೂ ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನವಹಿಸಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ವ್ಯಸನಿಗಳಾಗಬಾರದು. ಕುಟುಂಬದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಮಾದಕ ವಸ್ತುಗಳಿಂದ ಅತ್ಯಂತ ಜಾಗೃತರಾಗಿರಬೇಕು. ಸಮಾಜದ ಜವಾಬ್ದಾರಿಯುತ ಪ್ರಜೆಯಾಗಿ ಮಾದಕ ವಸ್ತುಗಳ ಮಾರಾಟ ಮತ್ತು ಅಕ್ರಮ ಸಾಗಾಟದಂತಹ ಪ್ರಕರಣಗಳು ಕಂಡು ಬಂದರೆ ತಕ್ಷಣ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದರು.

ವಿದ್ಯಾರ್ಥಿಗಳಿಂದ ಜಾಗೃತ ಜಾಥಾ ನಡೆಸಲಾಯಿತು. ಎ.ಟಿ. ಮಳ್ಳಳ್ಳಿ, ಎಂ.ಎಸ್. ಅತ್ತಾರ, ಬಿ.ಡಿ. ಯರಗೊಪ್ಪ, ಕೆ.ಸಿ. ಜೋಗಿ, ಎಸ್. ಶಿವಮೂರ್ತಿ, ಎಸ್. ಸಂಶಿಹಿರೇಮಠ, ಎಸ್.ಎಫ್. ಧರ್ಮಾಯತ, ಆರ್.ಎಂ. ಗುಳಬಾಳ, ಜ್ಯೋತಿ ಪೂಜಾರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net