ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದವರಿಗೆ ದಂಡ

Harapanahalli Traffic Police
ಹರಪನಹಳ್ಳಿಯ ಇಜಾರಿ ಶಿರಸಪ್ಪ ವೃತ್ತದಲ್ಲಿ ಶನಿವಾರ ರಾತ್ರಿ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಿದವರಿಗೆ ಪಿಎಸ್‌ಐ ಶಂಭುಲಿಂಗಯ್ಯ ಎಸ್.ಹಿರೇಮಠ ದಂಡ ವಿಧಿಸಿ ವಸೂಲಿ ಮಾಡಿದರು.
Published on

ಹರಪನಹಳ್ಳಿ: ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್, ಕಾರು, ಅಟೋ ಚಾಲಕರು ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದ್ದರಿಂದ ಸ್ಥಳೀಯ ಪೊಲೀಸರು ಶನಿವಾರ ರಾತ್ರಿ ದಂಡ ವಸೂಲಿ ಮಾಡಿದರು.

ಪಟ್ಟಣದ ಇಜಾರಿ ಶಿರಸಪ್ಪ ವೃತ್ತ, ಐಬಿ ಸರ್ಕಲ್ ಸೇರಿ ಪ್ರಮುಖ ಬೀದಿಗಳಲ್ಲಿ ಶನಿವಾರ ಅಡ್ಡಾದಿಡ್ಡಿಯಾಗಿ ಬೈಕ್, ಕಾರು, ಆಟೋಗಳನ್ನು ನಿಲ್ಲಿಸಲಾಗುತ್ತಿತ್ತು. ಇದರಿಂದ ಅಂಗಡಿ ಮಾಲೀಕರು ಹಾಗೂ ಗ್ರಾಹಕರಿಗೆ ಕಿರಿಕಿರಿಯಾಗುತ್ತಿತ್ತು.

ಹೀಗಾಗಿ ಪೊಲೀಸರು ಶನಿವಾರ ರಾತ್ರಿ ವಾಹನ ಮಾಲೀಕರಿಗೆ ದಂಡ ವಿಧಿಸಿದರು. ನಿಲುಗಡೆ ಸ್ಥಳ ಬಿಟ್ಟು ಎಲ್ಲೆಂದರಲ್ಲೆ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್‌ಐ ಶಂಭುಲಿಂಗಯ್ಯ ಎಸ್.ಹಿರೇಮಠ ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net