

ಸಿಂಧನೂರು: ದುಶ್ಚಟಗಳಿಂದ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆಂದು ಡಿವೈಎಸ್‌ಪಿ ಬಿ.ಎಸ್.ತಳವಾರ ಹೇಳಿದರು.
ಇದನ್ನೂ ಓದಿ: ದುಶ್ಚಟ ತ್ಯಜಿಸಿ ಉತ್ತಮ ನಾಗರಿಕರಾಗಲಿ
ನಗರದ ಶ್ರೀ ಕನಕದಾಸ ಪದವಿ ಮಾಹಾವಿದ್ಯಾಲಯದಲ್ಲಿ ಉಪ-ವಿಭಾಗ ಪೊಲೀಸ್ ಇಲಾಖೆ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ತಾಲೂಕ ಘಟಕ ಸಂಯುಕ್ತಾಶ್ರಯದಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮ ಕುರಿತ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು.
ಮದ್ಯಪಾನ, ಧೂಮಪಾನದಂಥ ದುಶ್ಚಟಗಳಿಗೆ ಹದಿಹರೆಯದ ವಯಸ್ಸಿನವರು ಒಳಗಾಗುತ್ತಾರೆ. ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅದರಿಂದ ಹೊರ ಬರುವುದು ಸಾಧ್ಯವಿಲ್ಲ. ತನ್ನ ಮೇಲಿನ ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.
ಈ ಹಿಂದೆ ಮದ್ಯಪಾನಕ್ಕೆ ವಯಸ್ಸಿನ ಅಂತರವಿತ್ತು. ಈಗ ಚಿಕ್ಕ ವಯಸ್ಸಿನ ವಯೋಮಾನದವರು ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಇವರಿಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆಂದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ತಾಲೂಕು ಯೋಜನಾಧಿಕಾರಿ ಶೇಖರ್ ಶೆಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಎಂ ಭಾಸ್ಕರ್, ಸಿಪಿಐ ಸುಧೀರ್ ಬೆಂಕಿ, ಪಿಎಸ್‌ಐ ವೆಂಕಟೇಶ ಇದ್ದರು.