

ಮಸ್ಕಿ: ಹಬ್ಬ-ಹರಿದಿನಗಳಲ್ಲಿ ದುಷ್ಟ ಶಕ್ತಿಗಳು ಸಮಾಜಕ್ಕೆ ಕಂಟಕವಾಗಿ ಪರಿಣಮಿಸುತ್ತಾರೆ. ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಗುರುವಾರ ಮಾತನಾಡಿದರು. ಸಿಪಿಐ ಬಾಲಚಂದ್ರ ಡಿ.ಲಕ್ಕಂ ಮಾತನಾಡಿ, ಹಿಂದು-ಮುಸ್ಲಿಮರು ಸೌಹಾರ್ದದಿಂದ ಹಬ್ಬಗಳನ್ನು ಆಚರಣೆ ಮಾಡಬೇಕು. ಯಾರಾದರೂ ಕಾನೂನು ಉಲ್ಲಂಘನೆ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ವಹಿಸಲಾಗುವುದು ಎಂದು ಎಚ್ಚರಿಸಿದರು.
ಗಣೇಶ ಮಂಡಳಿಯವರು ಕಡ್ಡಾಯವಾಗಿ ಪೊಲೀಸ್ ಇಲಾಖೆಯ ನಿಯಮಗಳನ್ನು ಪಾಲಿಸಬೇಕು. ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಬೇಕು. ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆಗೆ ಪರವಾನಗಿ ಪಡೆಯಲು ಏಕಗವಾಕ್ಷಿ ವ್ಯವಸ್ಥೆ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ದ್ವೇಷ ಭಾವನೆ ಬಿತ್ತುವ ಪೋಸ್ಟ್ ಹಾಕಬಾರದು. ಹೊಸ ಕಾಯ್ದೆಗಳ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ಬಾಲಚಂದ್ರ ಲಕ್ಕಂ ತಿಳಿಸಿದರು.
ಗ್ರಾಮದ ಹಿರಿಯ ಮುಖಂಡ ಮಹದೇವಪ್ಪಗೌಡ ಪೊಲೀಸ್ ಪಾಟೀಲ್ ಮಾತನಾಡಿ, ಜಾತಿ-ಭೇದ ಬಿಟ್ಟು ಎಲ್ಲರೂ ಒಟ್ಟಾಗಿ ಸೌಹಾರ್ದದಿಂದ ಹಬ್ಬ ಆಚರಣೆ ಮಾಡೋಣ. ಗಣೇಶ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಪ್ರದೇಶದಲ್ಲಿ 12 ಜನರ ಗಣೇಶ ಸಲಹಾ ಸಮಿತಿ ರಚಿಸಿ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ಎಂದು ಸಲಹೆ ನೀಡಿದರು.
ಪಿಎಸ್‌ಐ ತಾರಾಬಾಯಿ, ಪುರಸಭೆ ಮುಖ್ಯಾಧಿಕಾರಿ ನರಸರಡ್ಡಿ, ಮುಸ್ಲಿಂ ಧರ್ಮ ಗುರು ಜಿಲಾನಿ ಖಾಜಿ, ಪ್ರಕಾಶ್ ದಾರಿವಾಲ, ಪುರಸಭೆ ಸದಸ್ಯ ಮೌನೇಶ ಮುರಾರಿ, ಕ್ರೈಂ ಬ್ಯಾಂಚ್ ಪಿಎಸ್‌ಐ ಬೀಮದಾಸ್, ಶ್ರೀಶೈಲಪ್ಪ ಸಜ್ಜನ್, ಅಬ್ದುಲ್ ಗನಿಸಾಬ್, ಮಸೂದಪಾಷಾ, ಮಾರಲದಿನ್ನಿ ಗ್ರಾಪಂ ಅಧ್ಯಕ್ಷ ಬೀರಪ್ಪ, ಶಿವುರಡ್ಡಿ, ಕಿರಣ್ ಮುರಾರಿ, ಶ್ರೀಶೈಲ, ಸಿದು ್ದಮುರಾರಿ, ನಿಸಾರ್, ಜೆಸ್ಕಾಂ ಜೆಇ ಮುರಳಿ ಇತರರಿದ್ದರು.