ಮತ ಯಂತ್ರಗಳ ಹಂಚಿಕೆ

randomastion
Published on

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ಮೇ 7 ರಂದು ನಡೆಯುವ ಮತದಾನ ಕಾರ್ಯಕ್ಕೆ, ಲೋಕಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಮತಗಟ್ಟೆಗಳಿಗೆ ಮತಯಂತ್ರಗಳು ಮತ್ತು ವಿವಿ ಪ್ಯಟ್ ಯಂತ್ರಗಳನ್ನು ಹಂಚಿಕೆ ಮಾಡುವ 2 ನೇ ಹಂತದ ರ‍್ಯಾಂಡಮೈಜೇಷನ್ ಕಾರ್ಯವು ಚುನಾವಣಾ ವೀಕ್ಷಕ ರಾಜೀವ್ ರತನ್ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ಈ ರ‍್ಯಾಂಡಮೈಜೇಷನ್ ಕಾರ್ಯದಲ್ಲಿ, ಲೋಕಸಭಾ ವ್ಯಾಪ್ತಿಯಲ್ಲಿನ ಯಾವ ಮತಗಟ್ಟೆಗಳಿಗೆ, ಯಾವ ಮತ ಯಂತ್ರಗಳು ಮತ್ತು ವಿವಿ ಪ್ಯಾಟ್ ಗಳನ್ನು ಹಂಚಿಕೆ ಮಾಡಬೇಕು ಎನ್ನುವ ಕುರಿತಂತೆ ಮತ ಯಂತ್ರಗಳು ಮತ್ತು ವಿವಿ ಪ್ಯಾಟ್‌ಗಳ ನೋಂದಣಿ ಸಂಖ್ಯೆಗಳನ್ನು ತಂತ್ರಾಂಶದಲ್ಲಿ ಅಳವಡಿಸಲಾಯಿತು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ , ಸಹಾಯಕ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಮತ್ತು ಅವರ ಪ್ರತಿನಿಧಿಗಳು ಹಾಗೂ ಎನ್.ಐ.ಸಿ. ಮುಖ್ಯಸ್ಥ ಶ್ರೀಕಾಂತ ಜೋಷಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net