

ಹುಬ್ಬಳ್ಳಿ: ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಮತ್ತು ಎಪಿಎಂಸಿಗೆ ಚುನಾವಣೆ ನಡೆಸಬೇಕೆಂದು ಹುಬ್ಬಳ್ಳಿ ಎಂಪಿಎಂಸಿ ಮಾಜಿ ಅಧ್ಯಕ್ಷ ಸುರೇಶ ಕಿರೇಸೂರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ 5 ವರ್ಷಗಳಿಂದ ತಾಪಂ, ಜಿಪಂ ಗಳಿಗೆ ಚುನಾವಣೆ ನಡೆಸಿಲ್ಲವೇಕೆ ಎಂಬುದು ಜನರ ಪ್ರಶ್ನೆಯಾಗಿದೆ. ಸರ್ಕಾರಕ್ಕೆ ಚುನಾವಣೆ ನಡೆಸಲು ಆಸಕ್ತಿ ಇಲ್ಲ. ವಿರೋಧ ಪಕ್ಷದವರು ಒತ್ತಾಯ ಮಾಡುತ್ತಿಲ್ಲ. ಅಂದರೆ, ಎಲ್ಲ ಪಕ್ಷದವರು ಹೊಂದಾಣಿಕೆ ಆಗಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
ಎಂಪಿಎಂಸಿಗಳಲ್ಲಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಗಿದು 3 ವರ್ಷಗಳಾಗಿವೆ. ರೈತರು ಬೆಳೆದ ಬೆಳೆಗೆ ಎಂಪಿಎಂಸಿಯಲ್ಲಿ ಸರಿಯಾದ ಬೆಲೆ ಸಿಗುತ್ತಿಲ್ಲ. ರೈತರ ಬಗ್ಗೆ ಕಾಳಜಿ ಇದ್ದಲ್ಲಿ ಜಿಪಂ, ತಾಪಂ ಹಾಗೂ ಎಪಿಎಂಸಿಗೆ ಚುನಾವಣೆ ನಡೆಸಿ ಎಂದು ಒತ್ತಾಯಿಸಿದ್ದಾರೆ.