ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ; ನಿವೃತ್ತ ಪ್ರಾದೇಶಿಕ ಆಯುಕ್ತ  ಎಂ.ಜಿ. ಹಿರೇಮಠ ಸಲಹೆ

7ravig10.webp
Published on

ಬೆಳಗಾವಿ‌ : ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಒಳ್ಳೆಯ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಭವಿಷ್ಯ  ರೂಪಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾದೇಶಿಕ ಆಯುಕ್ತ  ಎಂ.ಜಿ. ಹಿರೇಮಠ ಹೇಳಿದರು.
ಕೆಎಲ್‌ಇ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವತಿಯಿಂದ ಬುಧವಾರ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಸಂಸ್ಥೆಯ ಜೆಎನ್‌ಎಂಸಿಯ ಡಾ.ಎಚ್.ಬಿ.ರಾಜಶೇಖರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕೆಎಲ್‌ಇ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ, ವಿಧಾನ ಪರಿಷತ್ ಸರ್ಕಾರದ ಮಾಜಿ ಮುಖ್ಯ ಸಚೇತಕ ಎಂ.ಎಂ.ಕವಟಗಿಮಠ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪಾಲಕರ ಜವಾಬ್ದಾರಿ ಪ್ರಮುಖವಾಗಿದೆ. ಪಾಲಕರು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ  ಕೆಎಲ್‌ಇ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಪ್ರಾಚಾರ್ಯ ವೇಣುಗೋಪಾಲ ರೆಡ್ಡಿ, ಗೀತಾ ಲಕ್ಕನ್ನವರ, ಶ್ರೀಧರ ಲಕ್ಕನ್ನವರ, ಕಲ್ಯಾಣಿ ಮುಚ್ಚಂಡಿ ಸೇರಿದಂತೆ ಉಪನ್ಯಾಸಕರು ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net