ಕರ್ಣಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಪಿ.ಜಯರಾಮ್ ಭಟ್ ನಿಧನ

ramachandra bhat KBL
ಕರ್ಣಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಪಿ.ಜಯರಾಮ್ ಭಟ್
Published on

ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪಿ.ಜಯರಾಮ್ ಭಟ್ (72) ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮುಂಬೈಗೆ ತೆರಳಿದ್ದ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಳಿಕ ಹೃದಯಾಘಾತಕ್ಕೆ ಒಳಗಾದರು.

ಪೊಳಲಿ ವಿದ್ಯಾ ವಿಲಾಸ ಶಾಲೆ, ಬೋರ್ಡ್ ಹೈಸ್ಕೂಲ್ ಗುರುಪುರ, ಸೈಂಟ್ ಅಲೋಶಿಯಸ್ ಕಾಲೇಜು, ಮೈಸೂರು ವಿಶ್ವವಿದ್ಯಾಲಯಗಳಲ್ಲಿ ಓದಿದ್ದ ಅವರು, ಎಂಎಸ್ಸಿ ಪದವೀಧರರಾಗಿದ್ದರು. 1972ರಲ್ಲಿ ಕೆಲಕಾಲ ಮೂಲ್ಕಿ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿದ್ದರು. 1973ರಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿ ಕರ್ಣಾಟಕ ಬ್ಯಾಂಕ್ ಸೇರ್ಪಡೆಯಾಗಿದ್ದ ಅವರು, 1976ರಲ್ಲಿ ಶಾಖಾ ವ್ಯವಸ್ಥಾಪಕರಾಗಿದ್ದರು. ಬಳಿಕ ಹಂತಹಂತವಾಗಿ ಉನ್ನತ ಸ್ಥಾನಕ್ಕೆ ಏರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net