ಮಾಜಿ ಸಿಎಂ ಕುಮಾರಸ್ವಾಮಿ ಸೋಮವಾರ ಪ್ರವೀಣ್ ನೆಟ್ಟಾರು, ಮಸೂದ್, ಪಾಜಿಲ್ ಮನೆಗೆ ಭೇಟಿ

IMG_20220731_131807
Published on

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ಪೂಜಾರಿ ನೆಟ್ಟಾರು, ಕಳಂಜದಲ್ಲಿ ಗುಂಪು ಹಲ್ಲೆಗೊಳಗಾಗಿ ಸಾವಿಗೀಡಾಗಿರುವ ಮಸೂದ್ ಕಳಂಜ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ನೀಡಲಿದ್ದಾರೆ.

ಸುರತ್ಕಲ್ ನಲ್ಲಿ ಹತ್ಯೆಯಾದ ಪಾಜಿಲ್ ಮನೆಗೂ ಬೇಟಿ ನೀಡುವರು. ಎಲ್ ಸಿ ಫಾರೂಕ್ ಬಿ ಎಂ ಹಾಗೂ ಪಕ್ಷದ ಮುಖಂಡರು ಜತೆಗಿರುವರು.

ಮಧ್ಯಾಹ್ನ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುವರು. ಬಳಿಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡುವರು ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net