

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಒಂದನೇ ತರಗತಿಯಿಂದ ಅಂತಿಮ ಪದವಿ, ಡಿಪ್ಲೊಮಾ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರಿಂದ
ಪಡೆಯಬಹುದು. ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೊಮಾವರೆಗೆ ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಸೆ.15 ಕೊನೆಯ ದಿನ. ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಅರ್ಜಿ ಸ್ವೀಕರಿಸಲು ಅಕ್ಟೋಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇಲ್ಲಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.