ಮಾಜಿ ಸಚಿವ, ಜೆಡಿಎಸ್ ಮುಖಂಡ ಸಿ.ಚನ್ನಿಗಪ್ಪ ನಿಧನ

CHANNIGAPPA
Published on

ತುಮಕೂರು: ಮಾಜಿ ಸಚಿವ, ಜೆಡಿಎಸ್ ಮುಖಂಡ ಸಿ. ಚನ್ನಿಗಪ್ಪ ಇಂದು (ಶುಕ್ರವಾರ) ಬೆಳಗ್ಗೆ ನಿಧನರಾದರು.

ಕಳೆದೊಂದು ವರ್ಷದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಚನ್ನಿಗಪ್ಪ ಸಿಂಗಾಪುರ್​ದಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಬೆಂಗಳೂರಿನ ಸಾಗರ್ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ನೆಲಮಂಗಲ ತಾಲೂಕಿನ ಬೈರನಾಯಕನ ಹಳ್ಳಿಯಲ್ಲಿ ಇಂದು (ಫೆ.21, ಶುಕ್ರವಾರ) ಅಂತ್ಯಕ್ರಿಯೆ ನೆರವೇರಲಿದೆ. ಮೃತರಿಗೆ ಪತ್ನಿ, ಶಾಸಕ ಡಿ.ಸಿ. ಗೌರಿಶಂಕರ್ ಸೇರಿ ಮೂವರು ಮಕ್ಕಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net