ಕೇಂದ್ರವನ್ನು ದೂರುತ್ತಾ ರಾಜ್ಯ ಸರ್ಕಾರ ಕಾಲಹರಣ: ಕೋಟ

Kota Srinivas poojari
Published on

ಉಡುಪಿ: ರಾಜ್ಯದ 216 ತಾಲೂಕು ಬರಪೀಡಿತವಾಗಿದೆ. ಇದರಿಂದ ರಾಜ್ಯದಲ್ಲಿ 33 ಸಾವಿರ ಕೋಟಿ ರೂ. ನಷ್ಟವಾಗಿದೆ. ತುರ್ತು ಪರಿಹಾರಕ್ಕಾಗಿ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡುವ ಬದಲು ಕೇಂದ್ರ ಸರ್ಕಾರವನ್ನು ದೂರುವುದರಲ್ಲಿ ಮಗ್ನವಾಗಿದೆ ಎಂದು ವಿಧಾನ ಪರಿಷತ್​ ಸದಸ್ಯ ಕೋಟ ಶ್ರೀನಿವಾಸ್​ ಪೂಜಾರಿ ಆಕ್ಷೇಪವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ತಪು$್ಪ ಮುಚ್ಚಿಡಲು ಕೇಂದ್ರವನ್ನು ದೂರುತ್ತಿದೆ. ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ರೈತರಿಗೆ ಗೊಬ್ಬರ, ಬಿತ್ತನೆ ಬೀಜಗಳನ್ನು ವಿತರಿಸುವ ವ್ಯವಸ್ಥೆ ಮಾಡಬೇಕು. ಬಿಜೆಪಿಯ 17 ತಂಡ ರಾಜ್ಯದಲ್ಲಿ ಬರ ಅಧ್ಯಯನ ನಡೆಸಲಿದೆ ಎಂದು ಎಂದರು.

ಗೃಹಲಕ್ಷ್ಮೀ ಯೋಜನೆಯ ಎರಡನೇ ತಿಂಗಳ ಹಣ ಯಾರಿಗೂ ಬಂದಿಲ್ಲ. ಅಕ್ಕಿಗೆ ಬರೀ 170 ರೂ. ಹಾಕಿದ್ದಾರೆ. ಯವನಿಧಿಗಾಗಿ ಇದುವರೆಗೆ ಒಂದು ರುಪಾಯಿ ಬಿಡಗಡೆ ಮಾಡಿಲ್ಲ, ಸಿಎಂ, ಡಿಸಿಎಂ ಕೇಂದ್ರವನ್ನು ದೂರುವುದರಲ್ಲಿ ಮಾತ್ರ ಸಮನ್ವಯ ಸಾಧಿಸುತ್ತಿದ್ದಾರೆ. ಇವರಿಬ್ಬರ ಒಳಜಗಳದಿಂದಾಗಿ ಆಡಳಿತ ವೈಫಲ್ಯ ಕಾಣುತ್ತಿದೆ ಎಂದರು.

ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಗೃಹಸಚಿವ ಅಮಿತ್​ ಶಾ, ಸಾರಿಗೆ ಸಚಿವ ನಿತಿನ್​ ಗಡ್ಕರಿ, ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಬಿ.ಎಲ್​ ಸಂತೋಷ್​, ಯುಪಿ ಸಿಎಂ ಯೋಗಿ ಆದಿತ್ಯನಾಥ್​, ಮಹಾರಾಷ್ಟ್ರ ಡಿಸಿಎಂ ದೇವೆಂದ್ರ ಫಡ್ನವಿಸ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಾನು ಭಾಗಿಯಾಗಿದ್ದೆೆ. ಹಿಂದುಳಿದ ವರ್ಗದ ಸಂಘಟನಾತ್ಮಕ ವಿಚಾರ ಮೀಸಲಾತಿ ವಿಚಾರ ಚರ್ಚಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net