

ಗದಗ: ರಾಜ್ಯವನ್ನು ತೀವ್ರವಾಗಿ ಕಾಡುತ್ತಿರುವ ಕರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದ್ದು, ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಸಂಬಂಧಿ ಕೂಡ ಕರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಗದಗ ನಿವಾಸಿ ಶಿವಕುಮಾರ್ ಮಾನ್ವಿ (75) ಮೃತಪಟ್ಟವರು. ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಇವರು ನಾಲ್ಕು ದಿನಗಳ ಹಿಂದಷ್ಟೇ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರು ಎಳೆದಿದ್ದಾರೆ. ಇವರು ವಿನಯ ಕುಲಕರ್ಣಿ ಅವರ ಸಹೋದರಿಯ ಪತಿ.