ಮಾಜಿ ಶಾಸಕ ಅಕ್ಕಿ ಕೈ ಸೇರ್ಪಡೆ 22ರಂದು

18kdl4
Published on

ಕುಂದಗೋಳ: ಜೆಡಿಎಸ್ ನಾಯಕರನ್ನು ಕಾಂಗ್ರೆಸ್​ಗೆ ಸೆಳೆಯುವ ಕಾರ್ಯತಂತ್ರ ಉತ್ತರ ಕರ್ನಾಟಕದಲ್ಲಿಯೂ ಮುಂದುವರಿದಿದೆ.

ಮಾಜಿ ಶಾಸಕ ಎಂ.ಎಸ್. ಅಕ್ಕಿ ಜೆಡಿಎಸ್ ತೊರೆದು, ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟ ಸುಳಿವು ನೀಡಿರುವುದು ಕುಂದಗೋಳ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಮೂಡಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಅ. 22ರಂದು ಬೆಂಗಳೂರಿನ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಎಂ.ಎಸ್. ಅಕ್ಕಿ ಅವರು ಅಭಿಮಾನಿ ಗಳೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಕಾರ್ಯಕರ್ತರ ಅಭಿಪ್ರಾಯ, ನಾಯಕರ ಸಲಹೆ - ಸೂಚನೆ ಮೇರೆಗೆ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದೇನೆ. ಮುಂಬರುವ ದಿನಗಳಲ್ಲಿ ಕ್ಷೇತ್ರದಲ್ಲಿ ಜಿ.ಪಂ., ತಾ.ಪಂ. ಹಾಗೂ ಗ್ರಾ.ಪಂ. ಗಳಲ್ಲಿ ಕಾಂಗ್ರೆಸ್ ಸದಸ್ಯರ ಸಂಖ್ಯೆ ಹೆಚ್ಚಿಸುವಲ್ಲಿ ಹಾಗೂ ಪಕ್ಷ ಸಂಘಟನೆಗೆ ಸಾಮಾನ್ಯ ಕಾರ್ಯಕರ್ತನಂತೆ ಕರ್ತವ್ಯ ನಿರ್ವಹಿಸುತ್ತೇನೆ ಎಂದರು.

ಕುಂದಗೋಳ ಕ್ಷೇತ್ರದಲ್ಲೇ ಬೃಹತ್ ಸಮಾರಂಭ ಏರ್ಪಡಿಸಿ ಕಾಂಗ್ರೆಸ್ ಸೇರ್ಪಡೆಗೆ ಉದ್ದೇಶಿಸಲಾಗಿತ್ತು. ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ.| ಎಂ.ಎಸ್. ಅಕ್ಕಿ ಮಾಜಿ ಶಾಸಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net