ಮಾಜಿ ಶಾಸಕ ಅಮೃತ ದೇಸಾಯಿ ಧನಸಹಾಯ

27 Dwd 2
Published on

ಧಾರವಾಡ: ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮೃತಪಟ್ಟ ಯಲ್ಲಪ್ಪ ಹಿಪ್ಪಿಯವರ ಮನೆಗೆ ಮಾಜಿ ಶಾಸಕ ಅಮೃತ ದೇಸಾಯಿ ಶನಿವಾರ ಭೇಟಿ ನೀಡಿ ಕುಟುಂಬದವರಿಗೆ ಧನಸಹಾಯ ನೀಡಿದರು.
ನಿರಂತರ ಮಳೆಯಿಂದ ಶುಕ್ರವಾರ ರಾತ್ರಿ ಪಕ್ಕದ ಮನೆಯ ಗೋಡೆ ಕುಸಿದು ಯಲ್ಲಪ್ಪ ಮೃತಪಟ್ಟು, ಆತನ ಪತ್ನಿ ಹನಮವ್ವ ಹಾಗೂ ಪುತ್ರಿ ಯಲ್ಲವ್ವ ಗಾಯಗೊಂಡಿದ್ದರು. ಗಾಯಾಳುಗಳು ಇನ್ನೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಮೃತ ಯಲ್ಲಪ್ಪನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಅಮೃತ ದೇಸಾಯಿ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net