ಅವಕಾಶ ಕೊಟ್ಟರೆ ಲೋಕಸಭೆಗೆ ಸ್ಪರ್ಧಿಸುವೆ ಎಂದ‌ ಮಾಜಿ ಶಾಸಕ ಅನಿಲ ಬೆನಕೆ

FB_IMG_1693962065223.jpg
Published on

ಬೆಳಗಾವಿ: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೊಟ್ಟಿಲ್ಲವೆಂದು ಬಿಜೆಪಿ ತೊರೆಯುವುದಿಲ್ಲ. ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಅನಿಲ ಬೆನಕೆ ಹೇಳಿದರು.

ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡೂವರೆ ದಶಕದಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿದ್ದೇನೆ‌. ನಾನು ಕಾಂಗ್ರೆಸ್ ಮುಖಂಡರ ಸಂಪರ್ಕದಲ್ಲಿಲ್ಲ. ವೈಯಕ್ತಿಕವಾಗಿ ನನ್ನ ಹೆಸರು ಹಾಳು ಮಾಡುವ ದೃಷ್ಟಿಯಿಂದ ಕೆಲವರು ಕುತಂತ್ರ ಮಾಡಿರಬಹುದು ಎಂದರು.

‘ಮುಂದಿನ ಲೋಕಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಪಕ್ಷದ ವರಿಷ್ಠರು ಅವಕಾಶ ಕೊಟ್ಟರೆ, ನಾನೇ ಚುನಾವಣೆಗೆ ಸ್ಪರ್ಧಿಸುತ್ತೇನೆ. ಪಕ್ಷ ಬೇರೆಯವರಿಗೂ ಟಿಕೆಟ್ ಕೊಟ್ಟರೂ, ಅವರ ಗೆಲುವಿಗೆ ಶ್ರಮಿಸುತ್ತೇನೆ’ ಎಂದು ಹೇಳಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net