ರೈತ ಹೋರಾಟಗಾರ, ಮಾಜಿ ಸಂಸದ ಜಿ. ಮಾದೇಗೌಡ ನಿಧನ

Madegowda
Published on

ಮಂಡ್ಯ: ಅನಾರೋಗ್ಯಕ್ಕೆ ಒಳಗಾಗಿದ್ದ ರೈತ ಹೋರಾಟಗಾರ, ಮಾಜಿ ಸಂಸದ ಜಿ. ಮಾದೇಗೌಡ (92) ಅವರು ಇಂದು ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆ.ಎಂ.ದೊಡ್ಡಿಯ ಮಾದೇಗೌಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಕಾವೇರಿ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದ ಇವರು, ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಆಸ್ಪತ್ರೆಗೆ ಇವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net