

ಬೆಂಗಳೂರು : ಕಾಲೇಜು ಆರಂಭವಾಗುವುದಕ್ಕೂ ಮೊದಲೇ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ(ಆರ್ಜಿಯುಎಚ್ಎಸ್) ಮಾತ್ರ ಆತುರದಲ್ಲಿ ಜ.19ರಿಂದ ಎಲ್ಲ ವೈದ್ಯಕಿಯ ಪರೀಕ್ಷೆಗಳನ್ನು ನಡೆಸುವುದಾಗಿ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಇದು ವೈದ್ಯಕಿಯ ವಿದ್ಯಾರ್ಥಿಗಳ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದು, ಕೂಡಲೇ ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸಿ ಮಂಗಳವಾರ ಮಂಡ್ಯ, ಮೈಸೂರು, ಗುಲ್ಬರ್ಗಾ, ಬೆಳಗಾವಿ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲೂ ಎಐಡಿಎಸ್ಒ ವಿದ್ಯಾರ್ಥಿ ಸಂಟನೆ ನೇತೃತ್ವದಲ್ಲಿ ರಾಜೀವ್ಗಾಂಧಿ ಆರೋಗ್ಯ ವಿವಿಯ ಕುಲಪತಿ ಅವರನ್ನು ಭೇಟಿ ಮಾಡಿದ ವೈದ್ಯಕಿಯ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಲು ಮನವಿ ಮಾಡಿದರು. ತಪ್ಪಿದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಡಿ.1ರಿಂದ ವೈದ್ಯಕಿಯ ಕಾಲೇಜುಗಳು ಆರಂಭವಾಗಲಿದೆ. ಬರೀ ಆನ್ಲೈನ್ ಶಿಕ್ಷಣದಲ್ಲಿ ಭಾಗವಹಿಸಿ ಪರೀೆ ಬರೆಯುವುದು ಕಷ್ಟ. ಈ ಹಿನ್ನೆಲೆಯಲ್ಲಿ ಪರೀೆ ಮುಂದೂಡಬೇಕೆಂಬುದು ವಿದ್ಯಾರ್ಥಿಗಳ ಆಗ್ರಹವಾಗಿದೆ.