ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಾಗಾರ ನಾಳೆ

Screenshot_2023_0901_114624.png
Published on

ಬೆಳಗಾವಿ: ಜಿಲ್ಲಾಡಳಿತ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯಸಿಸುವಂಥ ಆಕಾಂಕ್ಷಿಗಳಿಗೆ ಸೆಪ್ಟೆಂಬರ್‌ 2ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರ ವರೆಗೆ ನಗರದ ಕುಮಾರ ಗಂಧರ್ವ ಕಲಾ ರಂಗಮಂದಿರದಲ್ಲಿ ಒಂದು ದಿನದ ಉಚಿತ ಕಾರ್ಯಾಗಾರ ಆಯೋಜಿಸಲಾಗಿದೆ.

ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಹಾಗೂ ಇತರ ಐ.ಎ.ಎಸ್. ಪ್ರೊಬೇಷ ನರಿ ಅಧಿಕಾರಿಗಳು ಸಂಪನ್ಮೂಲ ವ್ಯಕ್ತಿಗ ಳಾಗಿ ಆಗಮಿಸುವರು. ಐಎಎಸ್. ಹಾಗೂ ಕೆಎಎಸ್. ಪರೀಕ್ಷೆಗಳಿಗೆ ತಯಾರಿ ಮಾಡುತ್ತಿರುವವರು ಸದುಪಯೋಗ ಪಡದುಕೊಳ್ಳಬೇಕು. ಇದಕ್ಕಾಗಿ https://tinyurl.com/y92a62vk ವೆಬ್‌ಸೈಟ್‌ನಲ್ಲಿ ಹೆಸರು ನೋಂದಾಯಿಸಬೇಕು. ಮಾಹಿತಿಗಾಗಿ 7975856566, 9880149513 ಸಂಪರ್ಕಿಸಬಹುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net