

ಹೆಬ್ರಿ: ಶಿಕ್ಷಣ ಇಲಾಖೆ ಪ್ರಾಥಮಿಕ ವಿಭಾಗ ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಹೆಬ್ರಿ ಅಮೃತ ಭಾರತಿ ವಿದ್ಯಾಲಯದ ವಿದ್ಯಾರ್ಥಿನಿ ಸಮೀಕ್ಷಾ 200 ಮೀಟರ್ ಓಟದ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.