ರೋಗಿಗಳನ್ನು ಕಾಳಜಿಯಿಂದ ಪರೀಕ್ಷಿಸಿ

Published on

ವಿರಾಜಪೇಟೆ: ವಿರಾಜಪೇಟೆ ಆರೋಗ್ಯ ರಕ್ಷಾ ಸಮಿತಿ ಸಭೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಅಧ್ಯಕ್ಷತೆಯಲ್ಲಿ ಮಂಗಳವಾರ ಸಾರ್ವಜನಿಕ ಆಸ್ಪತ್ರೆ ಆಡಳಿತ ಕಚೇರಿಯಲ್ಲಿ ಆಯೋಜಿಸಲಾಗಿತ್ತು.

ಆಸ್ಪತ್ರೆ ವರದಿಯನ್ನು ತರಿಸಿಕೊಂಡು ಪರಿಶೀಲಿಸಿದರು. ಚಿಕಿತ್ಸೆಗೆ ಆಗಮಿಸುವ ಎಲ್ಲ ರೋಗಿಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ಒದಗಿಸುವಂತೆ ಎ.ಎಸ್.ಪೊನ್ನಣ್ಣ ಸೂಚನೆ ನೀಡಿದರು.

ಆಸ್ಪತ್ರೆಗೆ ಬರುವ ಎಲ್ಲ ರೋಗಿಗಳನ್ನು ಅತ್ಯಂತ ಕಾಳಜಿಯಿಂದ ಪರೀಕ್ಷಿಸಿ ಸೂಕ್ತ ವೈದ್ಯಕೀಯ ಚಿಕಿತ್ಸೆ ಹಾಗೂ ಸಲಹೆಗಳನ್ನು ನೀಡಬೇಕೆಂದು ಸೂಚನೆ ನೀಡಿದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ರಕ್ಷಾ ಸಮಿತಿ ಸದಸ್ಯರಾದ ಕುಂಡಚೀರ ಮಂಜು ದೇವಯ್ಯ, ಮಂಡೆಟೀರ ಅನಿಲ್ ಅಯ್ಯಪ್ಪ , ಸಂತೋಷ್ ಕುಮಾರ್, ಶೀಬಾ ಪೃಥ್ವಿನಾಥ್, ಸೈಯದ್ ಶಬೀರ್, ಅನಿತಾ, ಕಿಶೋರ್, ಅನಿತಾ ಪ್ರಸನ್ನ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net