ಮಾದರಿಯಾಗಿವೆ ಗ್ಯಾರಂಟಿ ಯೋಜನೆಗಳು

5 YLB 01
ಯಲಬುರ್ಗಾದಲ್ಲಿ ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹತ್ತು ಕೆಜಿ ಅಕ್ಕಿ ವಿತರಣೆ ಮಾಡಿದರು. ತಹಸೀಲ್ದಾರ್ ಬಸವರಾಜ ತೆನ್ನಳ್ಳಿ, ಕುಕನೂರು ತಹಸೀಲ್ದಾರ್ ಎಚ್. ಪ್ರಾಣೇಶ, ಗ್ಯಾರಂಟಿ ಸಮಿತಿ ಯಲಬುರ್ಗಾ ತಾಲೂಕು ಅಧ್ಯಕ್ಷ ಸುಧೀರ್ ಕೋರ್ಲಳ್ಳಿ, ಕುಕನೂರು ತಾಲೂಕು ಅಧ್ಯಕ್ಷ ಸಂಗಮೇಶ ಗುತ್ತಿ, ಮುಖಂಡರಾದ ಅಡಿವೆಪ್ಪ ಭಾವಿಮನಿ ಇತರರಿದ್ದರು.
Published on

ಯಲಬುರ್ಗಾ: ಬಡವರು ಹಾಗೂ ಸರ್ವ ಸಮುದಾಯಕ್ಕೆ ಉಪಯೋಗವಾಗುವಂತಹ ಅನೇಕ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದು ಇದು ದೇಶದಲ್ಲಿಯೇ ಮಾದರಿಯಾಗಿವೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ಶನಿವಾರ ಪಟ್ಟಣದ ಬುದ್ಧ, ಬಸವ, ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ, ಆಹಾರ ಇಲಾಖೆ, ಗ್ಯಾರಂಟಿ ಅನುಷ್ಠಾನ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಅನ್ನಭಾಗ್ಯ ಯೋಜನೆಯಡಿ ತಲಾ ಹತ್ತು ಕೆಜಿ ಅಕ್ಕಿ ಉಚಿತ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

1.26 ಕೋಟಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂ.ನಂತೆ ಗೃಹಲಕ್ಷ್ಮಿ ಹಣ ಅವರ ಖಾತೆಗೆ ನೇರ ಜಮಾ ಮಾಡಲಾಗುತ್ತಿದೆ. ಇದಕ್ಕಾಗಿ ಪ್ರತಿವಷರ್ 25 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ತಾಲೂಕಿನಲ್ಲಿ ಬಿಪಿಎಲ್ ಕಾರ್ಡ್‌ದಾರರು 63, 399 ಕುಟುಂಬಗಳಿದ್ದು ಓಟ್ಟು 2, 35,007 ಜನರಿಗೆ ಅನ್ನಭಾಗ್ಯ ಯೋಜನೆ ತಲುಪಿಸಲಾಗುತ್ತಿದೆ. 30 ಸಾವಿರ ಕೋಟಿ ರೂ. ಖರ್ಚು ಮಾಡಿ ಉಚಿತ ಬಸ್ ಪ್ರಯಾಣಕ್ಕೆ ಅನುಕೂಲ ಕಲ್ಪಿಸಿಕೊಡಲಾಗಿದೆ. ರಾಜ್ಯದಲ್ಲಿ 1.26 ಕೋಟಿ ಮಹಿಳೆಯರು ಶಕ್ತಿ ಯೋಜನೆ ಉಪಯೋಗ ಪಡೆದಿದ್ದಾರೆ ಎಂದರು.

ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ರಡ್ಡಿ ಶ್ರೀನಿವಾಸ ಮಾತನಾಡಿ, ಜಿಲ್ಲೆಯಲ್ಲಿ ಐದು ಗ್ಯಾರಂಟಿಗಳು ಎಲ್ಲ ಅರ್ಹ ಲಾನುಭವಿಗಳಿಗೆ ತಲುಪಿಸಲಾಗಿದೆ ಎಂದರು. ಪ್ರಮುಖರಾದ ಈರಪ್ಪ ಕುಡಗುಂಟಿ, ಸಂಗಣ್ಣ ತೆಂಗಿನಕಾಯಿ, ಮಹೇಶ ದೊಡ್ಡಮನಿ, ಛತ್ರಪ್ಪ ಛಲವಾದಿ, ಶಿವಾನಂದ ಬಣಕಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net