ಜಾನಪದ ನೃತ್ಯದಲ್ಲಿ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಷನ್ ಶಾಲೆ ಪ್ರಥಮ

ಜಾನಪದ ನೃತ್ಯದಲ್ಲಿ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಷನ್ ಶಾಲೆ ಪ್ರಥಮ
Published on

ನಾಪೋಕ್ಲು: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ ನಾಪೋಕ್ಲು ಹೋಬಳಿ ಘಟಕ ಹಾಗೂ ಸಹಕಾರ ಮಹಿಳಾ ಸಮಾಜ, ಪಿ.ಪಿ. ಫೌಂಡೇಷನ್ ಆಶ್ರಯದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಷನ್ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಪ್ರಶಸ್ತಿ ಪಡೆದರು.

ದ್ವಿತೀಯ ಸ್ಥಾನವನ್ನು ಕುಂಜಿಲ ಗ್ರಾಮದ ಆಕ್ಸ್‌ಫರ್ಡ್ ಶಾಲೆಯ ವಿದ್ಯಾರ್ಥಿಗಳ ತಂಡಗಳಿಸಿದರೆ, ತೃತೀಯ ಸ್ಥಾನವನ್ನು ಕೆಪಿಎಸ್ ಶಾಲೆಯ ವಿದ್ಯಾರ್ಥಿಗಳ ತಂಡ ಪಡೆದರು.

ಕನ್ನಡ ಭಾವಗೀತೆ ಸ್ಪರ್ಧೆಯಲ್ಲಿ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಷನ್ ಶಾಲೆಯ ವಿದ್ಯಾರ್ಥಿನಿ ದುಂದುಭಿ ಪ್ರಥಮ ಸ್ಥಾನವನ್ನು ಬಿಷನ್ ಬಾಳೆಯಡ ದ್ವಿತೀಯ ಸ್ಥಾನವನ್ನು ಹಾಗೂ ಕುಂಜಿಲ ಗ್ರಾಮದ ಆಕ್ಸ್‌ಫರ್ಡ್ ಶಾಲೆಯ ಅಫ್ನ ತೃತೀಯ ಸ್ಥಾನವನ್ನು ಪಡೆದರು.

ಜಾನಪದ ಗೀತೆ ಸ್ಪರ್ಧೆಯಲ್ಲಿ ಶ್ರೀರಾಮ ಟ್ರಸ್ಟ್ ಶಾಲೆಯ ಶಮಿಕಾ ಪ್ರಥಮ ಸ್ಥಾನವನ್ನು, ಅಂಬೇಡ್ಕರ್ ವಸತಿ ಶಾಲೆಯ ವೈಷ್ಣ ದ್ವಿತೀಯ ಸ್ಥಾನವನ್ನು ಹಾಗೂ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಷನ್ ಶಾಲೆಯ ವಿದ್ಯಾರ್ಥಿನಿ ದುಂದುಭಿ ತೃತೀಯ ಸ್ಥಾನವನ್ನು ಗಳಿಸಿದರು.

ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೆರವಂಡ ಉಮೇಶ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ ಕೇಶವ ಕಾಮತ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಕಾಫಿ ಬೆಳೆಗಾರ ಕೇಟೋಳಿರ ಕುಟ್ಟಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆರ್.ವನಜಾಕ್ಷಿ , ಸಹಕಾರಿ ಮಹಿಳಾ ಸಮಾಜದ ಅಧ್ಯಕ್ಷೆ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ, ಕೆಪಿಎಸ್ ಪ್ರೌಢಶಾಲಾ ಉಪ ಪ್ರಾಂಶುಪಾಲ ಎಂ.ಎಸ್ ಶಿವಣ್ಣ, ಪಿಪಿ ಫೌಂಡೇಶನ್ ಅಧ್ಯಕ್ಷ ಪಿ.ಪಿ.ಅಹಮದ್, ಅರಫತ್, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಮುನೀರ್ ಅಹಮದ್, ಹೋಬಳಿ ಕಸಾಪ ಗೌರವ ಕಾರ್ಯದರ್ಶಿ ಬಾಳೆಯಡ ದಿವ್ಯಾ ಮಂದಪ್ಪ, ಗೌರವ ಕಾರ್ಯದರ್ಶಿ ಉಮಾ ಪ್ರಭು, ಗೌರವ ಕೋಶಾಧಿಕಾರಿ ಎಂ.ಎ. ಮನ್ಸೂರ್ ಆಲಿ, ಸಂಘಟನಾ ಕಾರ್ಯದರ್ಶಿ ಸಿ.ಎಚ್. ಅಹಮದ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಹೇಮಾ, ಎನ್.ಕೆ. ಪ್ರಭು, ಬೊಳ್ಳಮ್ಮ ನಾಣಯ್ಯ ವಿಜೇತರಿಗೆ ಪ್ರಶಸ್ತಿ ಪತ್ರ ಹಾಗೂ ಟ್ರೋಫಿಗಳನ್ನು ವಿತರಿಸಿ ಶುಭ ಹಾರೈಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net