ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಉತ್ತಮ ಸಾಧನೆ

Excellent performance in chess championship
ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ ವಿಜಯಪುರದ ಬಿಎಲ್ಡಿಇ ಸಂಸ್ಥೆಯ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪದಕ ಪಡೆದಿರುವುದು.
Published on

ವಿಜಯಪುರ : ಬೆಂಗಳೂರಿನ ಬಿಎಂಎಸ್ ಇಂಜನಿಯರಿಂಗ್ ಕಾಲೇಜಿನಲ್ಲಿ ಜು. 18, 19ರಂದು ನಡೆದ ರಾಜ್ಯಮಟ್ಟದ ಪುರುಷ ಹಾಗೂ ಮಹಿಳೆಯರ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ ನಗರದ ಬಿಎಲ್ಡಿಇ ಸಂಸ್ಥೆಯ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನ ಸಹಯೋಗದಲ್ಲಿ ನಡೆದ ಪಂದ್ಯದಲ್ಲಿ ಬಿಎಲ್ಡಿಇ ಸಂಸ್ಥೆಯ ಮಹಿಳಾ ಚೆಸ್ ತಂಡದ ವಿದ್ಯಾರ್ಥಿನಿಯರಾದ ತೇಜಶ್ವಿನಿ ಪಾಟೀಲ, ಅಶ್ವಿನಿ ಜಂಗಮಶಟ್ಟಿ, ಅನನ್ಯ ಮಠಪತಿ, ಕುಂಕುಮ ಹಜೆರಿ ಮತ್ತು ಸೌಜನ್ಯ ಉಮದಿ ರಾಜ್ಯಕ್ಕೆ 3ನೇ ಸ್ಥಾನ ಪಡೆದು 2ನೇ ರನ್ನರ್ ಅಪ್ ಆಗಿದ್ದಾರೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ವಿ.ಜಿ. ಸಂಗಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಮಹಾವಿದ್ಯಾಲಯದ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net