ಕ್ರೀಡಾಕೂಟದಲ್ಲಿ ಎಕ್ಸಲಂಟ್ ದೈಹಿಕ ಶಿಕ್ಷಕಿಯರ ಸಾಧನೆ

Excellent performance of physical education teachers in sports meet
ವಿಜಯಪುರದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಹಾಗೂ ಪ.ಪೂ. ಕಾಲೇಜುಗಳ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆಗೈದ ವಿಜಯಪುರದ ಎಕ್ಸಲಂಟ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ದೈಹಿಕ ಶಿಕ್ಷಕಯರೊಂದಿಗೆ ಶಾಲಾ ಸಿಬ್ಬಂದಿ ಇದ್ದಾರೆ.
Published on

ವಿಜಯಪುರ: ಇಲ್ಲಿನ ಇಟ್ಟಂಗಿಹಾಳ ಬಳಿಯ ಎಕ್ಸಲಂಟ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ದೈಹಿಕ ಶಿಕ್ಷಕಿಯರು ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆಗೈದಿದ್ದಾರೆ.

ಇಲ್ಲಿನ ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕ್ರೀಡಾಕೂಟದಲ್ಲಿ ಶಾಲೆಯ ದೈಹಿಕ ಶಿಕ್ಷಕಿ ಸುಶ್ಮೀತಾ ಆಲಮೇಲಕರ 200 ಮೀ., 400 ಮೀ., 800 ಮೀ., ವಾಲಿಬಾಲ್, ಥ್ರೋಬಾಲ್ ಹಾಗೂ ರೀಲೆಯ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ, ಅಲ್ಲದೆ, ಅದೇ ಶಾಲೆಯ ಇನ್ನೋರ್ವ ದೈಹಿಕ ಶಿಕ್ಷಕಿ ದಾನಮ್ಮ ವಾಲಿ ಹ್ಯಾಂಡ್‌ಬಾಲ್ ಮತ್ತು ಬಾಸ್ಕೆಟ್‌ಬಾಲ್ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದೈಹಿಕ ಶಿಕ್ಷಕಿಯರ ಸಾಧನೆಗೆ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಡಾ. ಶಿವಾನಂದ ಕೆಲೂರ, ಪ್ರಾಚಾರ್ಯ ತುಳಜಾರಾಮ ಸುಕ್ತೆ ಮೆಚ್ಚುಗೆ ವ್ಯಕ್ಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net