ಎಕ್ಸಲೆಂಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

snd sports
ಸಿಂಧನೂರಿನ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದ ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದು ಬಹುಮಾನ ಪಡೆದುಕೊಂಡ ಎಕ್ಸಲೆಂಟ್ ಪದವಿಪೂರ್ವ ಕಾಲೇಜ್ ವಿದ್ಯಾರ್ಥಿಗಳು. ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಎನ್.ಸತೀಶ, ಎನ್.ಸತ್ಯನಾರಾಯಣ ಶ್ರೇಷ್ಠಿ, ಪರಶುರಾಮ ಮಲ್ಲಾಪುರ, ಶಶಿಧರ ಹಿರೇಮಠ, ಮಂಜುನಾಥ ಸೋಮಲಾಪುರ ಇದ್ದರು.
Published on

ಸಿಂಧನೂರು: ನಗರದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪಿಯು ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.

ಕಬಡ್ಡಿಯಲ್ಲಿ ಬಾಲಕರು ರೋಚಕ ಜಯಸಾಧಿಸಿ ಪ್ರಥಮ ಸ್ಥಾನ ಪಡೆದರು. ಅದೇ ರೀತಿ ಥೋಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಬಾಲಕಿಯರು ಹಾಗೂ ಬಾಲಕರ ಖೋಖೋ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವೈಯಕ್ತಿಕ ಆಟ 3 ಸಾವಿರ ಮೀಟರ್ ಓಟದಲ್ಲಿ ಪ್ರಜ್ವಲ್ (ಪ್ರಥಮ), 5 ಸಾವಿರ ಮೀ. ಓಟದಲ್ಲಿ ವಿಜಯ (ಪ್ರಥಮ) ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಕಾಲೇಜಿನ ಪ್ರಾಚಾರ್ಯ ಮಂಜುನಾಥ್ ಸೋಮಲಾಪುರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net