ಕಾಂಗ್ರೆಸ್​ನಿಂದ ಅತಿಯಾದ ತುಷ್ಟೀಕರಣ

New MT New
Published on

ಹುಬ್ಬಳ್ಳಿ : ಮೈಸೂರಿನ ಉದಯಗಿರಿಯಲ್ಲಿ ನಡೆದ ಕೋಮು ದಳ್ಳುರಿಯಲ್ಲಿ ಪೊಲೀಸ್ ರಾಣೆಗಳ ಮೇಲೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಯಲು ಕಾಂಗ್ರೆಸ್​ನ ಅತಿಯಾದ ತುಷ್ಟೀಕರಣ ರಾಜಕಾರಣವೇ ಕಾರಣ ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ದೂರಿದ್ದಾರೆ.

ಪುಂಡರು ಪೊಲೀಸರ ಮೇಲೆ ಕಲ್ಲು ಎಸೆದಿದ್ದರಿಂದ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಡಿಸಿಪಿ ಕಾರಿನ ಮೇಲೂ ಕಲ್ಲು ತೂರಿದ್ದಾರೆ. ಇಂತಹ ಪುಂಡರಿಗೆ ಕುಮ್ಮಕ್ಕು ನೀಡುತ್ತಿರುವುದು ಯಾರು? ಎಂದು ಶಾಸಕ ಟೆಂಗಿನಕಾಯಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಮೋಟ್ ಬ್ಯಾಂಕ್​ಗಾಗಿ ಅತಿಯಾದ ಮುಸ್ಲಿಂರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ದೂರಿದ್ದಾರೆ.

ಈ ಹಿಂದೆಯೂ ಹುಬ್ಬಳ್ಳಿಯಲ್ಲಿ ಕೋಮು ಘಟನೆಗಳು ನಡೆದಾಗ ರಾಜ್ಯ ಕಾಂಗ್ರೆಸ್ ಸರ್ಕಾರ ಆರೋಪಿಗಳ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸಲಿಲ್ಲ. ಬದಲಾಗಿ, ಅವರ ಮೇಲಿದ್ದ ಪ್ರಕರಣಗಳನ್ನು ಹಿಂಪಡೆಯಿತು ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಕೋಮು ಗಲಭೆಗಳು ನಡೆಯುತ್ತಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿರುವುದು ನಾಚಿಕೆಗೇಡಿನದ ಸಂಗತಿ ಎಂದು ಟೀಕಿಸಿದ್ದಾರೆ.

ಗೃಹ ಸಚಿವರಂತೂ ಖಾತೆ ನಿರ್ವಹಿಸುವುದಕ್ಕೆ ಆಗದೆ ಅಸಹಾಯಕರಾಗಿದ್ದಾರೆ. ಇಂತಹ ಸಮಾಜಘಾತುಕ ಶಕ್ತಿಗಳನ್ನು ಈಗಲೇ ಮಟ್ಟ ಹಾಕದೆ ಹೋದರೆ ಮುಂಬರುವ ದಿನಗಳಲ್ಲಿ ಕರ್ನಾಟಕವನ್ನು ತಾಲಿಬಾನ್ ಆಗಿ ಪರಿವರ್ತಿಸುತ್ತಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net